ಕೆ.ಆರ್.ಮಾರುಕಟ್ಟೆಯ ಅನಧಿಕೃತ ಅಂಗಡಿ ಮುಗ್ಗಟ್ಟುಗಳನ್ನು ತೆರವು

 KR Market Unofficial Store Removed

29-03-2019

ಹೈಕೋರ್ಟ್ ನಿರ್ದೇಶನದ ಮೇರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಶುಕ್ರವಾರ ಕೆ.ಆರ್.ಮಾರುಕಟ್ಟೆಯ ಅನಧಿಕೃತ ಅಂಗಡಿ ಮುಗ್ಗಟ್ಟುಗಳನ್ನು ತೆರವುಗೊಳಿಸಿದರು. 


ಅಗ್ನಿ ಶಾಮಕ ವಾಹನಗಳು ಹಾಗೂ ಜನರ ಸಂಚಾರಕ್ಕೆ ಅಡ್ಡಿಯಾಗುವಂತೆ ಸಾರ್ವಜನಿಕ ಪ್ರದೇಶ ಹಾಗೂ ಪಾದಚಾರಿ ಮಾರ್ಗಗಳಲ್ಲಿ ನಿರ್ಮಿಸಲಾಗಿದ್ದ ಕಟ್ಟಡಗಳನ್ನು ಮುಲಾಜಿಲ್ಲದೆ ತೆರವುಗೊಳಿಸುವಂತೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ನಿರ್ದೇಶನದ ಮೇರೆಗೆ ಅಧಿಕಾರಿಗಳು ಇಂದು ಕಾರ್ಯಾಚರಣೆ ನಡೆಸಿದರು. 


ಕೆ.ಆರ್.ಮಾರುಕಟ್ಟೆಯಲ್ಲಿ ಒಟ್ಟು 2012 ಅಂಗಡಿಗಳಿಗೆ ಅನುಮತಿ ನೀಡಲಾಗಿದೆ. ಆದರೆ, ಈ ಅಂಗಡಿಗಳು ಸುತ್ತಮುತ್ತಲಿನ ಖಾಲಿ ಪ್ರದೇಶ ಹಾಗೂ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿಕೊಂಡಿವೆ. ಒತ್ತುವರಿ  ಪ್ರದೇಶಗಳನ್ನು ತೆರವುಗೊಳಿಸಲಾಗುತ್ತಿದೆ. ಮಾರುಕಟ್ಟೆಯಲ್ಲಿ ಶೇ.60ರಿಂದ 70ರಷ್ಟು ಪ್ರದೇಶ ಒತ್ತುವರಿಯಾಗಿದೆ. ತೆರವು ಕಾರ್ಯಾಚರಣೆ ಪೂರ್ಣಗೊಂಡ ನಂತರ, ಅಗ್ನಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಹೈಕೋರ್ಟ್ ಆದೇಶ ಹಾಗೂ ಬಿಬಿಎಂಪಿ ನಿಯಮದ ಅನುಸಾರ ಪ್ರತಿ ಅಂಗಡಿಯೂ ಅಗ್ನಿ ಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಪಡೆಯುವುದು ಕಡ್ಡಾಯ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. 


ತೆರವು ಕಾರ್ಯಾಚರಣೆಯಲ್ಲಿ ಬಿಬಿಎಂಪಿಯ ಮಾರುಕಟ್ಟೆ ವಿಭಾಗದ ವಿಶೇಷ ಆಯುಕ್ತ ಎಸ್.ಜಿ.ರಾಘವೇಂದ್ರ ಹಾಗೂ ವಿಶೇಷ ಆಯುಕ್ತ  ರಣದೀಪ್ ಉಪಸ್ಥಿತರಿದ್ದರು. ಬಿಬಿಎಂಪಿಯ ನೂರಾರು ಅಧಿಕಾರಿಗಳು, ಸಿಬ್ಬಂದಿ, ಪೊಲೀಸ್‍ ಪಡೆ ಸೇರಿ 500ಕ್ಕೂ ಹೆಚ್ಚು ಜನರ ತಂಡ ತೆರವು ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು. 


ಸಂಬಂಧಿತ ಟ್ಯಾಗ್ಗಳು

#Bangalore #Shops #K R Market #Highcourt


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ