ಮೂಲಸೌಲಭ್ಯಗಳು ಇಲ್ಲದೇ ಸರ್ಕಾರಿ ಶಾಲೆಗಳು ದುಸ್ಥಿತಿಯಲ್ಲಿವೆ !

Kannada News

07-06-2017 285

ಬೆಂಗಳೂರು:-  ಖಾಸಗಿ ಶಾಲೆಗಳ ಹಾವಳಿಗೆ ಕಡಿವಾಣ ಹಾಕಬೇಕೆಂದು ಬಿಜೆಪಿಯ ಹಿರಿಯ ಶಾಸಕ ಗೋವಿಂದ ಕಾರಜೋಳ ವಿಧಾನಸಭೆಯಲ್ಲಿಂದು ಸರ್ಕಾರವನ್ನು ಒತ್ತಾಯಿಸಿದರು. ಖಾಸಗಿ ಶಾಲೆಗಳ ಹಾವಳಿ ತಡೆಗಟ್ಟದೇ ಹೋದರೆ ಮುಂದೊಂದು ದಿನ ಸರ್ಕಾರಿ ಶಾಲೆಗಳನ್ನು ಮುಚ್ಚುವಂತ ಪರಿಸ್ಥಿತಿ ಎದುರಾಗಲಿದೆ ಎಂದರು. ಇಲಾಖಾವಾರು ಬೇಡಿಕೆಗಳ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಹಾಗೂ ಮೂಲಸೌಲಭ್ಯಗಳು ಇಲ್ಲದೇ ಇರುವುದರಿಂದ ಈ ಶಾಲೆಗಳನ್ನು ಮುಚ್ಚುವಂತಹ ಸ್ಥಿತಿ ಉಂಟಾಗಿದೆ ಎಂದರು. ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಇನ್ನೂ 500 ವಸತಿ ಶಾಲೆಗಳನ್ನು ಪ್ರಾರಂಭ ಮಾಡಬೇಕು ಎಂದು ಅವರು ಒತ್ತಾಯಿಸಿದರು. ಕಳೆದ 4 ವರ್ಷಗಳಲ್ಲಿ ಶಿಕ್ಷಣವನ್ನು ವ್ಯಾಪಾರೀಕರಣ ಮಾಡಲಾಗಿದೆ ಎಂದರು. ಕೃಷಿಭಾಗ್ಯ ಯೋಜನೆಯಡಿ ಬಿಡುಗಡೆಯಾದ ಅನುದಾನ ದುರ್ಬಳಕೆಯಾಗುತ್ತಿದೆ. ವಿಶೇಷವಾಗಿ ಪರಿಶಿಷ್ಟರ ಅಭಿವೃದ್ಧಿಗಾಗಿರುವ ವಿಶೇಷ ಯೋಜನೆ ಅನುದಾನ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ ಎಂದರು. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಕಳೆದ 4 ವರ್ಷಗಳಲ್ಲಿ 20 ಸಾವಿರಕ್ಕೂ ಹೆಚ್ಚಿನ ಹೆಣ್ಣು ಮಕ್ಕಳು ನಾಪತ್ತೆಯಾಗಿದ್ದಾರೆ. ಅವರ ಪತ್ತೆಗೆ ಸರ್ಕಾರ ಕ್ರಮಕೈಗೊಂಡಿಲ್ಲ. ಪ್ರಾಮಾಣಿಕ ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿದ್ದು, ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಹೇಳಿದರು.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ