ಪ್ರತ್ಯೇಕತಾವಾದಿ ಯಾಸಿನ್ ಮಲ್ಲಿಕ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Yassin Malik detention extended

24-04-2019

ದೆಹಲಿ: ಕಾಶ್ಮೀರ ಪ್ರತ್ಯೇಕತಾವಾದಿ ಯಾಸಿನ್ ಮಲ್ಲಿಕ್ ನ್ಯಾಯಾಂಗ ಬಂಧನ ಅವಧಿಯನ್ನು ಮೇ 24ರವರೆಗೆ ವಿಸ್ತರಿಸಲಾಗಿದೆ. ಈ ಕುರಿತು ದೆಹಲಿ ಪಟಿಯಾಲ ಹೌಸ್ ಕೋರ್ಟ್ ಆದೇಶ ಹೊರಡಿಸಿದೆ. ಜೊತೆಗೆ, ಭದ್ರತೆಯ ಕಾರಣದಿಂದಾಗಿ ತಿಹಾರ್ ಜೈಲಿನ ಅಧಿಕಾರಿಗಳು ಮಲ್ಲಿಕ್ ವಿಚಾರಣೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲು ಅವಕಾಶ ಕೊಡಬೇಕು ಎಂದು ಕೋರ್ಟ್‍ಗೆ ಮನವಿ ಮಾಡಿದ್ದಾರೆ. ಈ ಕುರಿತು ಸರ್ಕಾರಿ ವಕೀಲರಿಂದ ಕೋರ್ಟ್ ವಿವರಣೆ ಕೋರಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಶ್ಮೀರ ಮಾಜಿ ಸಿಎಂ ಮೆಹಬೂಬ ಮುಫ್ತಿ, ಯಾಸಿನ್ ಮಲ್ಲಿಕ್ ಅವರನ್ನು ತಕ್ಷಣ ಬಿಡುಡೆ ಮಾಡಬೇಕು. ಅವರ ಆರೋಗ್ಯ ಸ್ಥಿರವಾಗಿಲ್ಲ. ಜಾಮಾತ್ ಎ ಇಸ್ಲಾಮಿ ಸಂಘಟನೆಯ ಇತರ ಸದಸ್ಯರನ್ನು ಕೂಡ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಸಾಧ್ವಿ ಪ್ರಜ್ಞಾ ಗಂಭೀರ ಆರೋಪಗಳ ನಡುವೆ ಕೂಡ ಬಿಡುಗಡೆಯಾಗಿದ್ದಾರೆ. ಅದರಂತೆ ಇವರು ಕೂಡ ಬಿಡುಗಡೆಯಾಗಬೇಕು ಎಂದು ಅವರು ಹೇಳಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Yasin Malik Separatist Kashmir Terrorism


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ