ಏರ್ ಇಂಡಿಯಾ ವಿಮಾನದಲ್ಲಿ ಆಕಸ್ಮಿಕ ಬೆಂಕಿ

Air India flight to San Francisco catches fire at Delhi airport

25-04-2019

ಏರ್ ಇಂಡಿಯಾದ ದೆಹಲಿ – ಸ್ಯಾನ್ ಫ್ರಾನ್ಸಿಸ್ಕೋ ವಿಮಾನದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತು. ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೋಯಿಂಗ್ 777 ವಿಮಾನದ ಆಕ್ಸಿಲರಿ ಪವರ್ ಯುನಿಟ್‍್ನಲ್ಲಿ ಈ ಅವಘಡ ಸಂಭವಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಏರ್ ಇಂಡಿಯಾ ಇದೊಂದು ಸಣ್ಣ ಘಟನೆ ಎಂದಿದ್ದು, ಅಗ್ನಿ ಅವಘಡ ಸಂಭವಿಸಿದ ವೇಳೆ ವಿಮಾನದಲ್ಲಿ ಪ್ರಯಾಣಿಕರು ಇರಲಿಲ್ಲ. ದುರಸ್ಥಿ ಕಾರ್ಯ ನೆರವೇರಿಸುವ ಸಮಯದಲ್ಲಿ ಈ ಘಟನೆ ನಡೆದಿದೆ. ತಕ್ಷಣ ಬೆಂಕಿಯನ್ನು ನಂದಿಸಲಾಗಿದೆ ಎಂದು ಸ್ಪಷ್ಟೀಕರಣವನ್ನು ನೀಡಿದೆ.


ಸಂಬಂಧಿತ ಟ್ಯಾಗ್ಗಳು

Air India Airport Fire Flight


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ