ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ

Karnataka SSLC Result - 2019

30-04-2019

2019 ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟವಾಗಲಿದೆ. ಮಧ್ಯಾಹ್ನದ ವೇಳೆಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ವೆಬ್ ಸೈಟ್  karresults.nic.in, ಹಾಗೂ  kaceb.kar.nic.in ನಲ್ಲಿ ಫಲಿತಾಂಶ ಹೊರಬೀಳಲಿದೆ. 

ಬೆಳಿಗ್ಗೆ 12 ರ ವೇಳೆಗೆ ಸುದ್ದಿಗೋಷ್ಠಿ ನಡೆಸಲಿರುವ ಪ್ರೌಢ ಶಿಕ್ಷಣ ಮಂಡಳಿ ಫಲಿತಾಂಶವನ್ನು ಪ್ರಕಟಿಸಲಿದೆ. ಅಲ್ಲದೇ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳುವ ವೇಳೆ ನೀಡಿರುವ ಮೊಬೈಲ್ ಸಂಖ್ಯೆಗೂ ಫಲಿತಾಂಶದ ಸಂದೇಶ ರವಾನೆಯಾಗಲಿದೆ.   

ಪ್ರಸಕ್ತ ಸಾಲಿನಲ್ಲಿ ಕರ್ನಾಟಕದಲ್ಲಿ ಒಟ್ಟು 2,847 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, 8.41 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.


ಸಂಬಂಧಿತ ಟ್ಯಾಗ್ಗಳು

SSLC Result Exam Website


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ