ಹಿರಿಯ ರಂಗಕರ್ಮಿ ಹಿರಣ್ಣಯ್ಯ ಇನ್ನಿಲ್ಲ

Master Hirannaiah passes Away

02-05-2019

ಹಿರಿಯ ರಂಗಕರ್ಮಿ, ನಟ, ನಾಡು ಕಂಡ ಅದ್ಭುತ ಪ್ರತಿಭೆ ಮಾಸ್ಟರ್ ಹಿರಣ್ಣಯ್ಯ ಇಂದು ಇಹಲೋಕ ತ್ಯಜಿಸಿದ್ದಾರೆ. ಇತ್ತೀಚಿಗೆ ಪಿತ್ತಜನಕಾಂಗ ತೊಂದರೆಯಿಂದ ಬಳಲುತ್ತಿದ್ದ ಹಿರಣ್ಣಯ್ಯ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಹಿರಣ್ಣಯ್ಯ ಅವರ ಲಂಚಾವತಾರ, ಮಕ್ಮಲ್‌ ಟೋಪಿ, ಸದಾರಮೆ ಮೊದಲಾದ ನಾಟಕಗಳು ಕರ್ನಾಟಕದಲ್ಲಿ ಮನೆಮಾತಾಗಿದೆ. ಲಂಚ ಸಾಮ್ರಾಜ್ಯ, ನಂ.73 ಶಾಂತಿ ನಿವಾಸ, ಗಜ ಸೇರಿದಂತೆ 31 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ಅಭಿನಯಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಹಿರಣ್ಣಯ್ಯ ಭಾಜನರಾಗಿದ್ದರು.


ಸಂಬಂಧಿತ ಟ್ಯಾಗ್ಗಳು

Master Hirannaih Actor Drama Passes away


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ