ಇಂದು 5 ನೇ ಹಂತದ ಮತದಾನ

Lok Sabha Elections 2019

06-05-2019

ದೇಶದಲ್ಲಿಂದು 5 ನೇ ಹಂತದ ಮತದಾನ ನಡೆಯುತ್ತಿದೆ. ಉತ್ತರ ಪ್ರದೇಶದ 14 ಕ್ಷೇತ್ರ, ರಾಜಸ್ತಾನದ 12, ಪಶ್ಚಿಮ ಬಂಗಾಳ, ಮಧ್ಯಪ್ರದೇಶದಲ್ಲಿ ತಲಾ ಏಳು ಹಾಗೂ ಬಿಹಾರದಲ್ಲಿನ ಐದು, ಜಾರ್ಖಂಡ್ ನಲ್ಲಿ 4 ಹಾಗೂ ಲಡಾಖ್‌ ಕ್ಷೇತ್ರದಲ್ಲಿ ಚುನಾವಣೆ ನಡೆಯಲಿದ್ದು, ದೇಶದ ಏಳು ರಾಜ್ಯಗಳ 51 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ, ಗೃಹ ಸಚಿವ ರಾಜನಾಥ್ ಸಿಂಗ್, ಸ್ಮೃತಿ ಇರಾನಿ ಮತ್ತಿತರೆ ರಾಜಕೀಯ ನಾಯಕರ ಭವಿಷ್ಯ ಇಂದು ಮತಪೆಟ್ಟಿಗೆಯಲ್ಲಿ ಭದ್ರವಾಗಲಿದೆ. ಅಮೇಥಿಯಲ್ಲಿ ರಾಹುಲ್ ಗಾಂಧಿ, ಕೇಂದ್ರ ಸಚಿವೆ ಸ್ಮೃತಿ ಇರಾನಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ರಾಯ್‌ಬರೇಲಿ ಕ್ಷೇತ್ರದಿಂದ ಸೋನಿಯಾಗಾಂಧಿ ಪುನರ್ ಆಯ್ಕೆ ಬಯಸಿದ್ದಾರೆ. ಇಲ್ಲಿ ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್ ಸೋನಿಯಾಗೆ ಎದುರಾಳಿಯಾಗಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Lok Sabha Poll Election Uttar Pradesh


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ