ರಫೆಲ್ ಮರುಪರಿಶೀಲನಾ ಅರ್ಜಿ : ತೀರ್ಪು ಕಾಯ್ದಿರಿಸಿದ ಸುಪ್ರೀಂ

Supreme court reserves order on Rafale review petitions

11-05-2019

ರಫೆಲ್ ಯುದ್ಧವಿಮಾನ ಕುರಿತ ಮರುಪರಿಶೀಲನಾ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.

ರಫೆಲ್ ಫೈಟರ್ ಜೆಟ್ ಒಪ್ಪಂದದ ಬಗ್ಗೆ ತನಿಖೆ ನಡೆಸಬೇಕೆಂದು ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ,  ಅರುಣ್ ಶೌರಿ, ವಕೀಲ ಪ್ರಶಾಂತ್ ಭೂಷಣ್ ಅರ್ಜಿ ಸಲ್ಲಿಸಿದ್ದರು. ಕಳೆದ ವರ್ಷ ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಇದೀಗ ಮತ್ತೆ ತೀರ್ಪನ್ನು ಮರುಪರಿಶೀಲಿಸಬೇಕೆಂದು ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ನಡೆಸಿದ್ದು, ತೀರ್ಪನ್ನು ಕೋರ್ಟ್ ಕಾಯ್ದಿರಿಸಿದೆ. ಈ ಮಧ್ಯೆ, ಇದೇ ಪ್ರಕರಣದಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ದಾಖಲಿಸಿರುವ ಕ್ರಿಮಿನಲ್ ಮೊಕದ್ದಮೆಯ ತೀರ್ಪನ್ನೂ ಸಹ ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.


ಸಂಬಂಧಿತ ಟ್ಯಾಗ್ಗಳು

Supreme court Petition Rafale CBI


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ