ದಲಿತರ ಮೇಲೆ ನಿರಂತರ ದೌರ್ಜನ್ಯಗಳು ನಡೆಯುತ್ತಿವೆ !

Kannada News

08-06-2017

ಬೆಂಗಳೂರು:- ನಗರದ ಹೊರವಲಯದ ಮಾಗಡಿ ತಾಲ್ಲೂಕಿನ ನಾಗಶೆಟ್ಟಿಹಳ್ಳಿಯಲ್ಲಿ ದೌರ್ಜನ್ಯಕ್ಕೊಳಗಾದ ದಲಿತರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ದಲಿತ ಹಕ್ಕುಗಳ ಸಮಿತಿಯ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶವ್ಯಕ್ತಪಡಿಸಿದರು. ಸದಾಶಿವನಗರದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಮನೆ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ನಾಗಶೆಟ್ಟಿಹಳ್ಳಿಯಲ್ಲಿ ದಲಿತರಿಗೆ ನೀಡಲಾಗಿದ್ದ ನಿವೇಶನಗಳನ್ನು ಕಾನೂನು ಬಾಹಿರವಾಗಿ ಬಸವೇಶ್ವರ ಜೀರ್ಣೋದ್ಧಾರ ಸಮಿತಿಗೆ ಖಾತೆ ಮಾಡಿಸಿಕೊಂಡಿರುವುದನ್ನು ರದ್ದುಪಡಿಸುವಂತೆ ಒತ್ತಾಯಿಸಿದರು. ನಾಗಶೆಟ್ಟಿಹಳ್ಳಿಯಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯಗಳು ನಡೆಯುತ್ತಿವೆ. ಜನಪ್ರತಿನಿಧಿಗಳು ಕೂಡ ದಲಿತರ ವಿರೋಧಿ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ಸಮಿತಿಯ ರಾಜ್ಯ ಸಂಚಾಲಕ ರಾಜಶೇಖರ ಮೂರ್ತಿ ದೂರದ್ದಾರೆ. ನಾಗಶೆಟ್ಟಿಹಳ್ಳಿಯಲ್ಲಿ ಸವರ್ಣಿಯರ ದೌರ್ಜನ್ಯದಿಂದಾಗಿ ದಲಿತ ಸಮುದಾಯದವರು ಭಯದ ವಾತಾವರಣದಲ್ಲಿ ಬದುಕುತ್ತಿದ್ದು, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಒತ್ತಾಯಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ