ಕುಂದಗೋಳದಲ್ಲಿ ಕುಸುಮಾ ಗೆಲುವು ಖಚಿತ..?

Byelection in Karnataka 2019

15-05-2019

ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಬಿಸಿ ಆರಿದ್ದು, ಇದೇ ತಿಂಗಳು 19 ರಂದು ನಡೆಯಲಿರುವ ಎರಡು ವಿಧಾನಸಭಾ ಉಪಚುನಾವಣೆಯ ಕಾವೇರಿದೆ. ಕುಂದಗೋಳ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಮಾಜಿ ಸಚಿವ ಸಿ ಎಸ್ ಶಿವಳ್ಳಿ ಅವರ ಪತ್ನಿ ಕುಸುಮಾ ಹಾಗೂ ಬಿಜೆಪಿ ಅಭ್ಯರ್ಥಿ ಎಸ್.ಐ ಚಿಕ್ಕನಗೌಡರ್ ಮಧ್ಯೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ. ಕುಂದಗೋಳದಲ್ಲಿ ಬಿಜೆಪಿ ಗೆಲುವು ಕಠಿಣ ಎಂದು ಆಂತರಿಕ ವರದಿ ಬಂದಿದ್ದು, ಕಮಲನಾಯಕರ ತಲೆನೋವಿಗೆ ಕಾರಣವಾಗಿದೆ.

ಈ ಮಧ್ಯೆ ಶಿವಳ್ಳಿ ಪತ್ನಿ ಕುಸುಮಾ ಪರ ಜನರ ಒಲವಿದೆ ಎನ್ನಲಾಗಿದ್ದು, ಕಾಂಗ್ರೆಸ್ ಜಯಭೇರಿ ಬಾರಿಸುತ್ತೆ ಎಂದೇ ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಇನ್ನು ಉಮೇಶ್ ಜಾದವ್ ರಿಂದ ತೆರವಾದ ಚಿಂಚೋಳಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿಯ ಉಮೇಶ್ ಜಾದವ್ ಮಗ ಅವಿನಾಶ್ ಜಾದವ್ ಸ್ಪರ್ಧಿಸಿದ್ದಾರೆ. ಮೇ 19 ರಂದು ಉಪಚುನಾವಣೆ ನಡೆಯಲಿದ್ದು, ಮೇ 23 ರಂದು ಫಲಿತಾಂಶ ಪ್ರಕಟವಾಗಲಿದೆ.


ಸಂಬಂಧಿತ ಟ್ಯಾಗ್ಗಳು

Byelection Result Lokasabha election Voting


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ