ಶಾ ರ್ಯಾಲಿಯಲ್ಲಿ ಗಲಭೆ: ಬಿಜೆಪಿಯಿಂದ ಪ್ರತಿಭಟನೆ

16-05-2019
ಕೊಲ್ಕೊತ್ತಾ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಪಶ್ಚಿಮ ಬಂಗಾಳದ ಕೊಲ್ಕೊತ್ತಾದಲ್ಲಿ ನಡೆಸುತ್ತಿದ್ದ ರೋಡ್ ಶೋ ವೇಳೆ ಈಶ್ವರಚಂದ್ರ ವಿದ್ಯಾಸಾಗರ್ ಅವರ ಪ್ರತಿಮೆ ಧ್ವಂಸ ಪ್ರಕರಣವನ್ನು ಖಂಡಿಸಿ ಇಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. ಪ್ರಜಾಪ್ರಭುತ್ವ ರಕ್ಷಿಸಿ, ಬಂಗಾಳ ರಕ್ಷಿಸಿ ಎಂಬ ಘೋಷವಾಕ್ಯದೊಂದಿಗೆ ಪ್ರತಿಭಟಿಸಲಿದ್ದಾರೆ.
ಕೋಲ್ಕತ್ತಾದಲ್ಲಿ ಅಮಿತ್ ಶಾ ರೋಡ್ ಶೋ ವೇಳೆ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದ್ದು, ಹಿಂಸಾಚಾರಕ್ಕೆ ತಿರುಗಿತ್ತು. ಈ ವೇಳೆ ಕೆಲವು ಕಿಡಿಗೇಡಿಗಳು ಈಶ್ವರಚಂದ್ರ ವಿದ್ಯಾಸಾಗರ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದರು.
ಈ ಕುರಿತು ಈಗಾಗಲೇ ರಾಜಕೀಯ ಕೆಸರೆರಚಾಟ ನಡೆಯುತ್ತಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ರೋಡ್ ಶೋ ನಡೆಸುತ್ತಿದ್ದ ವೇಳೆ ಸಿಆರ್ಪಿಎಫ್ ಪಡೆಯನ್ನು ನಿಯೋಜಿಸಿರಲಿಲ್ಲ. ಹಿಂಸಾಚಾರ ನಡೆದ ವೇಳೆ ನಾನು ಪಾರಾಗಲು ತುಂಬಾ ಪ್ರಯಾಸಪಟ್ಟೆ. ಬಿಜೆಪಿ ಕಾರ್ಯಕರ್ತರನ್ನು ಥಳಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಇನ್ನು ಈಶ್ವರಚಂದ್ರ ವಿದ್ಯಾಸಾಗರ್ ಪ್ರತಿಮೆ ಧ್ವಂಸ ಪ್ರಕರಣವನ್ನು ಖಂಡಿಸಿರುವ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಪ್ರತಿಮೆ ಧ್ವಂಸ ಕುರಿತು ತನಿಖೆಯಾಗಬೇಕು. ಈ ಘಟನೆ ಹೇಗೆ ನಡೆಯಿತು ಎಂಬ ಸಂಗತಿ ಬಹಿರಂಗವಾಗಬೇಕು ಎಂದು ಒತ್ತಾಯಿಸಿದ್ದಾರೆ.
ಒಂದು ಕಮೆಂಟನ್ನು ಹಾಕಿ