ಕೇನ್ಸ್ ರೆಡ್ ಕಾರ್ಪೆಟ್ ಮೇಲೆ ಹೀನಾ ಖಾನ್ ಬೆಡಗು

Cannes 2019: Hina Khan Shines Bright Like A Diamond In Her Red Carpet Debut

16-05-2019

ಫ್ರಾನ್ಸ್ ನಲ್ಲಿ 72ನೇ ಕೇನ್ಸ್ ಚಲನಚಿತ್ರೋತ್ಸವ ಭರ್ಜರಿಯಾಗಿ ನಡೆಯುತ್ತಿದೆ. ಅನೇಕ ಅಂತಾರಾಷ್ಟ್ರೀಯ ಖ್ಯಾತಿಯ ನಟ -ನಟಿಯರು ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿ ಕಣ್ಮನ ಸೆಳೆಯುತ್ತಿದ್ದಾರೆ.

ಇನ್ನು ಕೇನ್ಸ್ ಫಿಲಂ ಫೆಸ್ಟಿವಲ್ ನ 2 ನೇ ದಿನ ಕಿರುತೆರೆ ನಟಿ ಹೀನಾ ಖಾನ್ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿ ಗಮನ ಸೆಳೆದರು. 31 ವರ್ಷದ ಹೀನಾ ಇದೇ ಮೊದಲ ಬಾರಿಗೆ ಚಲನಚಿತ್ರೋತ್ಸವದಲ್ಲಿ ಭಾಗವಹಿಸಿದ್ದು, ರಿಚ್ ವರ್ಕ್ ಇರುವ ಗೌನ್ ನಲ್ಲಿ ಥೇಟ್ ಗೊಂಬೆಯ ಹಾಗೆ ಹೊಳೆಯುತ್ತಿದ್ದರು.

ಮೇ 14 ರಿಂದ 25 ರವರೆಗೆ ನಡೆಯಲಿರುವ ಈ ಫಿಲಂ ಫೆಸ್ಟಿವಲ್ ನಲ್ಲಿ ಬಾಲಿವುಡ್ ನಟಿಯರಾದ ಸೋನಂ ಕಪೂರ್, ಐಶ್ವರ್ಯ ರೈ ಬಚ್ಚನ್, ದೀಪಿಕಾ ಪಡುಕೋಣೆ ಸಹ ಭಾಗವಹಿಸಲಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Hina Khan Red Carpet Cannes 2019 France


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ