ಕಮಲ್ ಹಾಸನ್ ಮೇಲೆ ಕಲ್ಲು, ಮೊಟ್ಟೆ ಎಸೆತ

Stones, Eggs thrown at Kamal Hasan during election rally in TN

18-05-2019

ತಮಿಳುನಾಡಿನ ಅರವಕುರುಚಿಯಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದ ಸಂದರ್ಭದಲ್ಲಿ ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಮೇಲೆ ಕಿಡಿಗೇಡಿಗಳು ಕಲ್ಲು, ಮೊಟ್ಟೆ ಎಸೆದಿದ್ದಾರೆ. ಘಟನೆ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಲ್ಲದೇ ವೇದಿಕೆಯ ಮೇಲೆ ಮಾತನಾಡುತ್ತಿದ್ದಂತೆ ಮತ್ತೊಬ್ಬ ಕಿಡಿಗೇಡಿ ಚಪ್ಪಲಿ ಎಸೆದಿದ್ದು, ಅದು ಕಮಲ್ ಹಾಸನ್ ಗೆ ತಾಕಿಲ್ಲ. ಬದಲಾಗಿ ಡಯಾಸ್ ಎದುರಿಗೆ ಬಿದ್ದಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಕುರಿತು ಕಮಲ್ ಹಾಸನ್ ಪ್ರತಿಕ್ರಿಯೆ ನೀಡಿದ್ದು, ಬೆದರಿಸೋದ್ರಿಂದ ತಾನೇನು ಭಯಗೊಂಡಿಲ್ಲ ಎಂದು ತಿಳಿಸಿದ್ದಾರೆ.  ಇತ್ತೀಚಿಗಷ್ಟೇ ನಾಥೂರಾಮ್ ಗೊಡ್ಸೆ ಸ್ವತಂತ್ರ ಭಾರತದ ಮೊದಲ ಉಗ್ರ ಹಿಂದು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದು, ಅದು ಇಡೀ ದೇಶದಲ್ಲಿ ವಿವಾದ ಹಬ್ಬಿಸಿದೆ.


ಸಂಬಂಧಿತ ಟ್ಯಾಗ್ಗಳು

Kamal Hasan Rally Tamil Nadu Election


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ