ಕೇದಾರನಾಥ ಪುನರ್ ಅಭಿವೃದ್ಧಿ ಕುರಿತು ಪ್ರಧಾನಿ ಮೋದಿ ಸಭೆ

Modi holds meeting with Kedaranath chiefseceratory over development

18-05-2019

140ಕ್ಕೂ ಹೆಚ್ಚು ಚುನಾವಣಾ ಪ್ರಚಾರ ಸಭೆ, ರ್ಯಾಲಿಗಳಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರು ಇಂದಿನಿಂದ ದೇವಸ್ಥಾನಗಳತ್ತ ಮುಖ ಮಾಡಿದ್ದಾರೆ. ಕೇದಾರನಾಥಕ್ಕೆ ಭೇಟಿ ನೀಡಿದ್ದ ಮೋದಿ, ಸರ್ಕಾರದ ಮುಖ್ಯಕಾರ್ಯದರ್ಶಿ ಉತ್ಪಲ್ ಕುಮಾರ್ ಅವರೊಂದಿಗೆ ಕೇದಾರನಾಥ ಪುನರ್ ಅಭಿವೃದ್ಧಿ ಯೋಜನೆ ಕುರಿತು ಚರ್ಚಿಸಿದರು. 2013ರಲ್ಲಿ ಬೃಹತ್ ಪ್ರಳಯಕ್ಕೆ ಸಿಲುಕಿದ್ದ ಕೇದಾರನಾಥ್ ದೇವಾಲಯ ಮತ್ತು ಸುತ್ತಮುತ್ತಲ ಪ್ರದೇಶಗಳು ತೀವ್ರ ಹಾನಿಗೊಳಗಾಗಿದ್ದವು. ಈ ಹಿನ್ನೆಲೆಯಲ್ಲಿ ಕೇದಾರನಾಥ ಪುನರ್ವಸತಿಗೆ ಕೇಂದ್ರ ಸರ್ಕಾರ ಅಗತ್ಯ ನೆರವು ನೀಡಿತ್ತು. ಈ ಹಿಂದಿನ ರಾಜ್ಯ ಸರ್ಕಾರ ಕೂಡ ಪುನರ್ವಸತಿಗೆ ಅಗತ್ಯ ಕ್ರಮ ಕೈಗೊಂಡಿತ್ತು.


ಸಂಬಂಧಿತ ಟ್ಯಾಗ್ಗಳು

Narendra Modi Uttarakhand Kedaranath Development


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ