ಚುಣಾವಣೋತ್ತರ ಸಮೀಕ್ಷೆಯಲ್ಲಿ ಎನ್ ಡಿ ಗೆ ಬಹುಮತ: ಷೇರುಮಾರುಕಟ್ಟೆ ಜಿಗಿತ

Exit poll predict BJP win

20-05-2019

ದೇಶದಲ್ಲೆಡೆ ಚುನಾವಣೆ ಮುಗಿದಿದ್ದು ಫಲಿತಾಂಶಕ್ಕೆ ಇನ್ನು ಎರಡೇ ದಿನ ಬಾಕಿ ಇದೆ.

ಈ ಮಧ್ಯೆ ಬಹುನಿರೀಕ್ಷಿತ ಚುನಾವಣೋತ್ತರ ಸಮೀಕ್ಷೆ ಪ್ರಕಟಗೊಂಡಿದ್ದು, ಅದರಲ್ಲಿ ಬಿಜೆಪಿ ನೇತೃತ್ವದ ಎನ್ ಡಿ ಎ ಗೆ ಬಹುಮತ ಸಿಗಲಿದೆ ಎಂದು ಸಮೀಕ್ಷೆಯಲ್ಲಿ ತಿಳಿದುಬಂದಿದೆ.

ಇಂಡಿಯಾ ಟುಡೆ, ಸಿಎನ್ ಎನ್ ನ್ಯೂಸ್ 18, ನ್ಯೂಸ್ 24, ರಿಪಬ್ಲಿಕ್ ಸೇರಿದಂತೆ ಸುಮಾರು 10 ಕ್ಕೂ ಹೆಚ್ಚು ಮಾಧ್ಯಮಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆಯಲ್ಲಿ ಎನ್ ಡಿಎ 300 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದುಕೊಳ್ಳಲಿದೆ. ಇನ್ನು ಕರ್ನಾಟಕದಲ್ಲೂ ಸಹ ಬಿಜೆಪಿ ಗೆಲುವಿನ ನಗೆ ಬೀರಲಿದ್ದು, ಸುಮಾರು 20 ಸೀಟುಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿವೆ.

ಈ ಮಧ್ಯೆ ಪಶ್ಚಿಮ ಬಂಗಾಳದಲ್ಲಿ ಮೋದಿ ಅಲೆ ಇರುವುದನ್ನು ಸಾರಿ ಹೇಳಿರುವ ಸಮೀಕ್ಷೆಗಳ ಬಗ್ಗೆ ಮಾತನಾಡಿದ ಅಲ್ಲಿನ ಸಿಎಂ ಮಮತಾ ಬ್ಯಾನರ್ಜಿ, ಗಾಳಿಸುದ್ದಿಗಳನ್ನು ನಂಬಬೇಡಿ ಎಂದಿದ್ದಾರೆ. 

ಈ ಮಧ್ಯೆ, ಎನ್ ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುವ ಬಗ್ಗೆ ಸಮೀಕ್ಷೆಗಳು ಹೊರಬೀಳುತ್ತಿದ್ದಂತೆ ಷೇರು ಮಾರುಕಟ್ಟೆ ಆಕಾಶದೆತ್ತರಕ್ಕೆ ಜಿಗಿದಿದೆ.


ಸಂಬಂಧಿತ ಟ್ಯಾಗ್ಗಳು

BJP Exit poll NDA Lokasabha Election


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ