ಲೋಕಸಭೆಗೆ ಆಯ್ಕೆಯಾದ ಬಿಜೆಪಿಯ ಕಿರಿಯ ಸಂಸದ ತೇಜಸ್ವಿ ಸೂರ್ಯ

BJP gets its youngest MP from Bengaluru

24-05-2019

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಬಿಜೆಪಿಯ ತೇಜಸ್ವಿ ಸೂರ್ಯ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಲೋಕಸಭೆಗೆ ಆಯ್ಕೆಯಾದ ಬಿಜೆಪಿಯ ಅತ್ಯಂತ ಕಿರಿಯ ವಯಸ್ಸಿನ ಸಂಸದ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 28 ವರ್ಷ ವಯಸ್ಸಿನ ತೇಜಸ್ವಿ ಸೂರ್ಯ ಕಾಂಗ್ರೆಸ್ ನ ಬಿ.ಕೆ ಹರಿಪ್ರಸಾದ್ ವಿರುದ್ಧ ಬರೋಬ್ಬರಿ 3,31,192 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ದಿವಂಗತ ಅನಂತ್ ಕುಮಾರ್ ಅವರು ಬರೋಬ್ಬರಿ 6 ಬಾರಿ ಜಯಗಳಿಸಿದ್ದರು. ಅವರ ನಂತರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಗೆ ಟಿಕೆಟ್ ನೀಡಲಾಗುತ್ತದೆ ಎನ್ನಲಾಗಿತ್ತಾದರೂ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದ್ದು ಕಾನೂನು ಪದವಿ ಪಡೆದಿರುವ ಯುವ ಪ್ರತಿಭೆ 28 ವರ್ಷದ ತೇಜಸ್ವಿಯವರಿಗಾಗಿತ್ತು. ಆದರೆ ಇದೀಗ ಅಂದುಕೊಂಡದ್ದಕ್ಕಿಂತಲೂ ಹೆಚ್ಚಿನ ಮತಗಳ ಅಂತರದಿಂದ ತೇಜಸ್ವಿ ಸೂರ್ಯ ಜಯಗಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Tejasvi Surya Election Bengaluru MP


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ