ಎಲ್.ಕೆ.ಅಡ್ವಾಣಿ ಭೇಟಿಯಾದ ನರೇಂದ್ರ ಮೋದಿ

Modi meets L K Advani

24-05-2019

2019ರ ಲೋಕಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಬಿಜೆಪಿಯ ಹಿರಿಯ ನಾಯಕ ಮತ್ತು ಬಿಜೆಪಿ ಮಾರ್ಗದರ್ಶಕ ಮಂಡಳಿಯ ಸದಸ್ಯ ಎಲ್ ಕೆ ಅಡ್ವಾಣಿಯವರನ್ನು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದರು. ಜೊತೆಗೆ ಇನ್ನೊಬ್ಬ ಹಿರಿಯ ನಾಯಕ ಮುರಳಿ ಮನೋಹರ್ ಜೋಷಿಯವರನ್ನೂ ಭೇಟಿಯಾದರು.

ಕಳೆದ ಲೋಕಸಭೆ ಅವಧಿಯಲ್ಲಿ ಬಿಜೆಪಿ 272 ಲೋಕಸಭೆ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಸತತ ಎರಡನೇ ಅವಧಿಗೆ ಬಿಜೆಪಿ ಆಯ್ಕೆಯಾಗಿದ್ದು, ನರೇಂದ್ರ ಮೋದಿಯವರು ಸಂಪೂರ್ಣ ಬಹುಮತವನ್ನು ಪಡೆದಿದ್ದಾರೆ. ಪ್ರಸ್ತುತ ಲೋಕಸಭೆ ಅವಧಿ ಜೂನ್ 3ಕ್ಕೆ ಕೊನೆಯಾಗಲಿದ್ದು, ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Narendra Modi L K Advani L K Advani NDA


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ