ವಾರಣಾಸಿಗೆ ಇಂದು ಮೋದಿ ಭೇಟಿ

PM Modi

27-05-2019

ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಬಹುಮತ ಪಡೆದ ಬಳಿಕ ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ  ವಾರಣಾಸಿಗೆ ತೆರಳಲಿದ್ದಾರೆ. ಅಲ್ಲಿನ ಜನತೆಗೆ ಧನ್ಯವಾದ ಅರ್ಪಿಸಲಿದ್ದಾರೆ.

ಮೊದಲು ರೋಡ್ ಶೋ ಮೂಲಕ ಕಾಶಿ ವಿಶ್ವನಾಥನ ಸನ್ನಿಧಿಗೆ ತೆರಳಿ ಪೂಜೆ ಸಲ್ಲಿಸಿದ ಬಳಿಕ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೋದಿ ಜೊತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಭಾಗಿಯಾಗಲಿದ್ದಾರೆ.

ಮೋದಿ ಆಗಮನದ ಹಿನ್ನೆಲೆಯಲ್ಲಿ ವಾರಣಾಸಿ ತಳಿರು ತೋರಣಗಳಿಂದ ಸಿಂಗಾರಗೊಂಡಿದೆ. ಅಲ್ಲಿನ ಜನತೆ ಪ್ರಧಾನಿ ಸ್ವಾಗತಕ್ಕೆ ಉತ್ಸುಕರಾಗಿದ್ದಾರೆ. ವಾರಣಾಸಿಯಲ್ಲಿ ಮೋದಿ ಬರೋಬ್ಬರಿ 4.79 ಲಕ್ಷ ಗಳ ಹೆಚ್ಚುವರಿ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ನಿನ್ನೆಯಷ್ಟೇ ಅಹ್ಮದಾಬಾದ್ ಗೆ ತೆರಳಿ ತಮ್ಮ 98 ವರ್ಷದ ತಾಯಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದರು.


ಸಂಬಂಧಿತ ಟ್ಯಾಗ್ಗಳು

Narendra Modi Election 2019 Varanasi Victory


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ