ನಮ್ಮ ಯಾವೊಬ್ಬ ಶಾಸಕನೂ ಬಿಜೆಪಿಗೆ ಹೋಗುವುದಿಲ್ಲ: ಎಂ ಬಿ ಪಾಟೀಲ್

M B Patil Statement

27-05-2019

ನಮ್ಮ ಪಕ್ಷದ ಯಾವೊಬ್ಬ ಶಾಸಕನೂ ಬಿಜೆಪಿಗೆ ಹೋಗುವುದಿಲ್ಲ ಎಂದು ಗೃಹ ಸಚಿವ ಎಂ ಬಿ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸರ್ಕಾರವನ್ನು ಕೆಡವಲು ಈ ಹಿಂದೆ ಸತತವಾಗಿ ಪ್ರಯತ್ನಿಸಿದೆ. ಭವಿಷ್ಯದಲ್ಲಿ ಕೂಡ ಅಸ್ಥಿರಗೊಳಿಸಲು ಯತ್ನಿಸಲಿದೆ. ಆದರೆ, ಈ ಸರ್ಕಾರ ತನ್ನ ಅವಧಿಯನ್ನು ಪೂರ್ಣಗೊಳಿಸಲಿದೆ ಎಂದರು.

ನಿನ್ನೆ ಮಾಜಿ ಸಿಎಂ ಮತ್ತು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಹಿರಿಯ ನಾಯಕ ಎಸ್ ಎಂ ಕೃಷ್ಣ ಮನೆಗೆ ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿಹೊಳಿ, ಡಾ. ಸುಧಾಕರ್ ಭೇಟಿ ನೀಡಿದ್ದರು. ಇದೇ ವೇಳೆ ಬಿಜೆಪಿಯ ನಾಯಕರು ಕೂಡ ಭೇಟಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೈತ್ರಿ ಸರ್ಕಾರದ ಕ್ಷಣಗಣನೆ ಆರಂಭವಾಗಿದೆ ಎಂದು ವಿಶ್ಲೇಷಿಸಲಾಗಿತ್ತು. ಈ ಎಲ್ಲ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಿದ ಎಂ ಬಿ ಪಾಟೀಲ್ ಸರ್ಕಾರ ಅವಧಿ ಪೂರೈಸಲಿದೆ ಎಂದು ಹೇಳಿದ್ದಾರೆ.


ಸಂಬಂಧಿತ ಟ್ಯಾಗ್ಗಳು

M B Patil MLA BJP Government


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ