ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ?

DKS become KPCC President?

30-05-2019

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಸಚಿವ ಡಿ ಕೆ ಶಿವಕುಮಾರ್ ಅವರಿಗೆ ನೀಡಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಪಕ್ಷದ ಸಾರಥ್ಯ ಹೊತ್ತು ಪಕ್ಷವನ್ನು ಮತ್ತೆ ಚೇತರಿಸಿಕೊಳ್ಳುವಂತೆ ಮಾಡಲು ಡಿಕೆಶಿಯವರಿಗೆ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಸುಳಿವು ನೀಡಲಾಗಿದೆ. ಇದಕ್ಕೆ ಕಾಂಗ್ರೆಸ್ ನ ಬಹುತೇಕ ಮುಖಂಡರು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಮೊದಲು ಆಪರೇಷನ್ ಕಮಲಕ್ಕೆ ಒಳಗಾಗದಂತೆ ತನ್ನ ಶಾಸರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಕಾಂಗ್ರೆಸ್ ಸಫಲವಾಗಿತ್ತು. ಇದಕ್ಕೆ ಮುಖ್ಯ ಕಾರಣರಾಗಿದ್ದವರು ಡಿಕೆಶಿ. ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಈ ಜವಾಬ್ದಾರಿ ನೀಡಲು ಮುಂದಾಗಿದೆ. ಆದರೆ ಡಿಕೆಶಿಯವರಿಗೆ ಈ ಸ್ಥಾನ ನೀಡಬೇಕಾದಲ್ಲಿ ಅವರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಆದರೆ ಅವರು ಇದಕ್ಕೆ ಸಮ್ಮತಿಸುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.


ಸಂಬಂಧಿತ ಟ್ಯಾಗ್ಗಳು

DKS KPCC Congress Karnataka


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ