ಇಂದು ನರೇಂದ್ರ ಮೋದಿ ಪ್ರಮಾಣ ವಚನ

PM Modi

30-05-2019

ಲೋಕಸಭಾ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಗೆದ್ದು ಬೀಗಿರುವ ಎನ್ ಡಿ ಎ  ಇಂದು 2ನೇ ಬಾರಿಗೆ ಸರ್ಕಾರ ರಚಿಸಲಿದೆ. ನರೇಂದ್ರ ಮೋದಿ ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ರಾಷ್ಟ್ರಪತಿ ಭವನದದಲ್ಲಿ ಸಂಜೆ 7 ಗಂಟೆಗೆ ಸಮಾರಂಭ ನಡೆಯಲಿದೆ. ಸಮಾರಂಭಕ್ಕೆ ಬಿಮ್ ಸ್ಟೆಕ್ ರಾಷ್ಟ್ರಗಳ ಪ್ರತಿನಿಧಿಗಳು, ಗಣ್ಯಾತಿಗಣ್ಯರು ಸೇರಿದಂತೆ 8 ಸಾವಿರ ಅತಿಥಿಗಳು ಭಾಗವಹಿಸಲಿದ್ದಾರೆ.

ಮಾರಿಷಸ್, ಕಿರ್ಗಿಜಿಸ್ಥಾನ, ಶ್ರೀಲಂಕಾ, ಬಾಂಗ್ಲಾದೇಶ, ಮ್ಯಾನ್ಮಾರ್, ನೇಪಾಳ, ಭೂತಾನ್ ಮುಂತಾದ ದೇಶಗಳ ಅಧ್ಯಕ್ಷರುಗಳು ಪಾಲ್ಗೊಳ್ಳಲಿದ್ದಾರೆ.

ಇನ್ನು ಪ್ರವಾಣವಚನ ಸಮಾರಂಭದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಹೆಚ್ ಡಿ ಕುಮಾರಸ್ವಾಮಿ, ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಈ ಮಧ್ಯೆ ಮುಖ್ಯಮಂತ್ರಿಗಳಾದ ಮಮತಾ ಬ್ಯಾನರ್ಜಿ, ಅಮರೀಂದರ್ ಸಿಂಗ್, ಕಮಲನಾಥ್, ಅಶೋಕ್ ಗೆಹ್ಲೋಟ್, ಭೂಪೇಶ್ ಬಾಘೆಲ್ ಗೈರಾಗಲಿದ್ದಾರೆಂದು ತಿಳಿದುಬಂದಿದೆ.


ಸಂಬಂಧಿತ ಟ್ಯಾಗ್ಗಳು

PM Modi Rashtrapati Bhavan Swearing Event


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ