ನೂತನ ಸಚಿವರಿಗೆ ಖಾತೆ ಹಂಚಿದ ಮೋದಿ: ಕರ್ನಾಟಕಕ್ಕೆ ದಕ್ಕಿದ್ದೆಷ್ಟು?

DVS, Joshi, Angadi become Centre Ministers

01-06-2019

ದೆಹಲಿ: ಪ್ರಧಾನಿ ನರೇಂದ್ರ ಮೋದಿ ನೂತನ ಸಚಿವರಿಗೆ ಖಾತೆಗಳನ್ನು ಹಂಚಿದ್ದಾರೆ. ಈ
ಬಾರಿ ಎಲ್ಲರ ಲೆಕ್ಕಾಚಾರಗಳನ್ನೂ ಮೀರಿ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳಲ್ಲಿ
ಬಿಜೆಪಿ ಜಯಭೇರಿ ಬಾರಿಸಿತ್ತು. ಅದರಲ್ಲೂ ರಾಜ್ಯದ ಎಲ್ಲ ಮೀಸಲು ಕ್ಷೇತ್ರಗಳಲ್ಲೂ
ಬಿಜೆಪಿ ಅಭ್ಯರ್ಥಿಗಳೇ ಗೆಲುವು ಸಾಧಿಸಿದ್ದರು. ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ,
ಪಂಗಡದ ಸಂಸದರಿಗೆ ಸ್ಥಾನ ಸಿಗಲಿದೆ ಎಂದು ಎಣಿಸಲಾಗಿತ್ತು. ಆದರೆ, ಕಳೆದ ಬಾರಿ
ಸಚಿವರಾಗಿದ್ದ ಡಿ ವಿ ಸದಾನಂದ ಗೌಡ ಹೊರತುಪಡಿಸಿ ಯಾರಿಗೂ ಅವಕಾಶ ಸಿಕ್ಕಿಲ್ಲ. ಜೊತೆಗೆ
ತಲಾ ಒಬ್ಬ ಲಿಂಗಾಯತ, ಬ್ರಾಹ್ಮಣರಿಗೆ ಸಚಿವ ಸ್ಥಾನವನ್ನು ನೀಡಲಾಗಿದೆ.

ಮಾಜಿ ಸಿಎಂ ಮತ್ತು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ರಾಸಾಯನಿಕ  ರಸಗೊಬ್ಬರ ಖಾತೆ,
ಇದೇ ಮೊದಲ ಬಾರಿ ಕೇಂದ್ರ ಸಚಿವರಾಗಿ ಪ್ರಮಾಣ ಸ್ವೀಕರಿಸಿದ ಪ್ರಲ್ಹಾದ ಜೊಷಿಯವರಿಗೆ
ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿಗಾರಿಕೆ ಖಾತೆ ಮತ್ತು ಬೆಳಗಾವಿ ಸಂಸದ
ಸುರೇಶ್ ಅಂಗಡಿಯವರು ರೈಲ್ವೆ ರಾಜ್ಯ ಖಾತೆ ಸಚಿವರಾಗಿ ಅವಕಾಶ ಪಡೆದಿದ್ದಾರೆ.

ರಾಜ್ಯಸಭೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಮತ್ತು ಈ ಹಿಂದೆ ರಕ್ಷಣಾ
ಖಾತೆ ಸಚಿವೆಯಾಗಿದ್ದ ನಿರ್ಮಲಾ ಸೀತಾರಾಮನ್ ಅವರಿಗೆ ಈ ಬಾರಿ ಹಣಕಾಸು ಖಾತೆ
ಪಡೆದಿದ್ದಾರೆ.


ಸಂಬಂಧಿತ ಟ್ಯಾಗ್ಗಳು

DV SadanandaGowda Suresh Angadi Prahlad Joshi Oath


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ