ಕಾಂಗ್ರೆಸ್ ಸಂಸದೀಯ ನಾಯಕಿಯಾಗಿ ಸೋನಿಯಾ ಆಯ್ಕೆ

Sonia Gandhi elected Leader of New Congress Lawmakers

01-06-2019

ದೆಹಲಿ: ಲೋಕಸಭೆ ಚುನಾವಣೆಯಲ್ಲಿ ದಯನೀಯ ಸೋಲಿನ ಬಳಿಕ ಸೋನಿಯಾ ಗಾಂಧಿಯವರನ್ನು ಕಾಂಗ್ರೆಸ್ ಸಂಸದೀಯ ಸಮಿತಿಯ ನಾಯಕಿಯನ್ನಾಗಿ ಆರಿಸಲಾಗಿದೆ. ದೆಹಲಿಯಲ್ಲಿ ನಡೆದ ಪಕ್ಷದ ಸಭೆಯಲ್ಲಿ ಸೋನಿಯಾ ಗಾಂಧಿಯವರನ್ನುಸಂಸದೀಯ ಸಮಿತಿಯ ಮುಖ್ಯಸ್ಥೆಯಾಗಿ ಆಯ್ಕೆ ಮಾಡಲಾಯಿತು. ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ಕೇವಲ 52 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದರು. ಆದರೆ, ಪಕ್ಷದ ಹಿರಿಯ ನಾಯಕರು ರಾಹುಲ್ ಪಕ್ಷದ ಸಾರಥ್ಯವನ್ನು ಮುಂದುವರೆಸಬೇಕು ಎಂದು ಒತ್ತಾಯಿಸಿದ್ದರು. ಈ ಎಲ್ಲ ಬೆಳವಣಿಗೆಗಳ ನಡುವೆ ಸೋನಿಯಾ ಅವರನ್ನು ಸಂಸದೀಯ ನಾಯಕಿಯಾಗಿ ಚುನಾಯಿಸಲಾಗಿದೆ.


ಸಂಬಂಧಿತ ಟ್ಯಾಗ್ಗಳು

Sonia Gandhi Election Congress Delhi


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ