ಉದ್ಯಾನನಗರಿಯಲ್ಲಿ ವರುಣನ ಆರ್ಭಟ, ಹಲವೆಡೆ ಹಾನಿ

Rain battered Bengaluru, uproots more than 20 trees

03-06-2019

ಬೆಂಗಳೂರು: ನಗರದ ಹಲವೆಡೆ ಭಾನುವಾರ ಸಂಜೆ ಅಬ್ಬರಿಸಿದ್ದ ಮಳೆ ಮತ್ತೆ ರಾತ್ರಿ ಕೂಡ ಸುರಿದಿದೆ. ಹಲವೆಡೆ ಗುಡುಗು, ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ.

ತ್ಯಾಗರಾಜನಗರದ ವಿದ್ಯಾಪೀಠ ಸರ್ಕಲ್ ಬಳಿ ಶ್ರೀ ಸಾಯಿ ಸನ್ನಿಧಿ ಅಪಾರ್ಟ್ ಮೆಂಟ್ ಸೆಲ್ಲರ್‍ಗೆ ನೀರು ನುಗ್ಗಿದೆ. ಮಳೆ ನೀರು ನುಗ್ಗಿದ ಪರಿಣಾಮ 5 ಅಡಿ ಎತ್ತರದ ಕಾಂಪೌಂಡ್ ಕುಸಿದು ಬಿದ್ದಿದೆ. ಕಾಂಪೌಂಡ್ ಕುಸಿದಿದ್ದಕ್ಕೆ 10 ಕ್ಕೂ ಹೆಚ್ಚು ಕಾರುಗಳು 6 ದ್ವಿಚಕ್ರ ವಾಹನಳಿಗೆ ಹಾನಿಯಾಗಿದೆ. ನಗರದ ಹಲವಾರು ಕಡೆ 20ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿವೆ. ಕೆಲವು ಕಡೆ ಬಿರುಗಾಳಿ ಜೋರಾಗಿದ್ದ ಹಿನ್ನೆಲೆಯಲ್ಲಿ ಮರಗಳ ರೆಂಬೆಗಳು ಮುರಿದು ಬಿದ್ದಿವೆ.


ಸಂಬಂಧಿತ ಟ್ಯಾಗ್ಗಳು

Rain Trees Bengaluru Lightning


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ