ನಾಳೆ ಜೆಡಿಎಸ್ ಶಾಸಕರ ಸಭೆ

JDS meet tomorrow

03-06-2019

ಬೆಂಗಳೂರು : ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ನಾಳೆ ಸಂಜೆ ಜೆ.ಪಿ. ನಗರದ ತಮ್ಮ ನಿವಾಸದಲ್ಲಿ ಜಾತ್ಯಾತೀತ ಜನತಾದಳದ ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರ ಸಭೆ ನಡೆಸಲಿದ್ದಾರೆ.

ರಾಜ್ಯದ ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿರುವ ಗೊಂದಲ ಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್ ನಾಯಕರು ‌ನಡೆಸಿರುವ ಲಾಭಿ ಹಾಗೂ ಹಲವರು ರಾಜಿನಾಮೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಉಂಟಾಗಿರುವ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಶಾಸಕರ ಸಭೆ ಕರೆಯಲಾಗಿದೆ

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆ ಫಲಿತಾಂಶ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶದ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಲೋಕಸಭಾ ಚುನಾವಣೆ ವೇಳೆ ಮೈತ್ರಿ ಧರ್ಮಕ್ಕೆ ವಿರುದ್ಧವಾಗಿ ಕೆಲಸ ಮಾಡಿದ್ದಾರೆನ್ನಲಾದ ಕೆಲವು ಶಾಸಕರು ಮತ್ತು ಸಚಿವರ ಬಗ್ಗೆ ಚರ್ಚೆ ನಡೆಯಲಿದ್ದು ಒಬ್ಬಿಬ್ಬ ಸಚಿವರ ತಲೆದಂಡದ ಬಗ್ಗೆಯೂ ನಿರ್ಧಾರ ಹೊರಬೀಳಲಿದೆ ಎನ್ನಲಾಗಿದೆ.


ಸಂಬಂಧಿತ ಟ್ಯಾಗ್ಗಳು

JDS CM MLA H D Kumaraswamy


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ