ದೆಹಲಿಯಲ್ಲಿ ಮಹಿಳೆಯರಿಗೆ ಮೆಟ್ರೊ, ರೈಲು ಪ್ರಯಾಣ ಫ್ರೀ

Free Travel For Women In Delhi Buses, Metro For "Safety": Kejriwal

03-06-2019

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಮಹಿಳೆಯರಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ. ದೆಹಲಿಯಲ್ಲಿ ಮೆಟ್ರೋ ರೈಲು ಹಾಗೂ ಬಸ್ಸುಗಳಲ್ಲಿ ಪ್ರಯಾಣ ಮಾಡುವ ಮಹಿಳೆಯರು ಇನ್ನು ಹಣ ನೀಡಬೇಕಿಲ್ಲ. ಮಹಿಳೆಯರಿಗೆ ಸಾರ್ವಜನಿಕ ಸಾರಿಗೆ ಸಂಪೂರ್ಣ ಉಚಿತ ಎಂದು ಕೇಜ್ರಿವಾಲ್ ಘೋಷಿಸಿದ್ದಾರೆ. ಮಹಿಳೆಯರ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಸರ್ಕಾರ ಅದರ ಸಂಪೂರ್ಣ ವೆಚ್ಚ ಭರಿಸಲಿದೆ ಎಂದಿದ್ದಾರೆ.

ತಮ್ಮ ಸರ್ಕಾರ ಅತ್ಯಂತ ಪ್ರಾಮಾಣಿಕವಾದದ್ದು ಅಲ್ಲದೇ ನಿಮ್ಮ ಹಣವನ್ನು ನಿಮ್ಮ ಸೌಕರ್ಯಕ್ಕಾಗಿ ಬಳಸಲಾಗುತ್ತಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಇತ್ತೀಚಿಗಷ್ಟೇ ನಡೆದ ಲೋಕಸಭಾ ಚುನಾವಣೆಯಲ್ಲಿ ದೆಹಲಿಯಲ್ಲಿದ್ದ 7 ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಬಾರಿಸಿದ್ದು, ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಆಮ್ ಆದ್ಮಿ ಪಕ್ಷ ಮಹಿಳೆಯರ ಮನಗೆಲ್ಲಲು ಈ ಕ್ರಮ ಕೈಗೊಂಡಿದೆ.


ಸಂಬಂಧಿತ ಟ್ಯಾಗ್ಗಳು

Aravind Kejriwal Women Delhi Government


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ