ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಚ್ ವಿಶ್ವನಾಥ್

H Vishwanath resigned to his JDS state president post

04-06-2019

ಬೆಂಗಳೂರು: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಮತ್ತು ಹುಣಸೂರು ಕ್ಷೇತ್ರದ ಜೆಡಿಎಸ್ ಶಾಸಕ ಎಚ್ ವಿಶ್ವನಾಥ್ ಪಕ್ಷದ ಹುದ್ದೆಗೆ ರಾಜೀನಾಮೆ ಘೋಷಿಸಿದ್ದಾರೆ. ಇಂದು ಈ ಕುರಿತು ಅವರು ಅಧಿಕೃತ ಹೇಳಿಕೆ ನೀಡಿದರು. 2018ರ ವಿಧಾನಸಭೆ ಚುನಾವಣೆ ನಂತರ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮತ್ತು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಎಚ್ ವಿಶ್ವನಾಥ್ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರಾಗಿಸಿದ್ದರು.

ಆದರೆ, ಕಾಂಗ್ರೆಸ್ ಮೈತ್ರಿ, ಟಿಕೆಟ್ ಹಂಚಿಕೆ ಇತ್ಯಾದಿ ವಿಷಯಗಳಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ತಮ್ಮನ್ನು ದೇವೇಗೌಡರ ಕುಟುಂಬ ಸಂಪರ್ಕಿಸುತ್ತಿಲ್ಲ ಎಂಬ ನೋವು ಅವರಲ್ಲಿತ್ತು. ಈ ಎಲ್ಲ ಬೆಳವಣಿಗೆಗಳ ನಡುವೆ ಅವರಿಗೆ ಲಘು ಹೃದಯಾಘಾತವೂ ಆಗಿತ್ತು. ವಿಶ್ವನಾಥ್ ಯಾವುದೇ ಕ್ಷಣದಲ್ಲಿ ರಾಜೀನಾಮೆ ನೀಡುತ್ತಾರೆ ಎಂಬ ವದಂತಿಗಳು ಕೆಲವು ತಿಂಗಳಿಂದ ಹರಿದಾಡುತ್ತಲೂ ಇದ್ದವು. ಇದೀಗ ಸ್ವತಃ ಅವರೇ ರಾಜೀನಾಮೆ ನೀಡಿರುವ ವಿಷಯವನ್ನು ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

H Vishwanath President JDS Resign


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ