ಒಂದು ಕಣ್ಣಿಗೆ ಸುಣ್ಣ ಒಂದು ಕಣ್ಣಿಗೆ ಬೆಣ್ಣೆ ಹಚ್ಚಬಾರದು: ರಾಮಲಿಂಗಾ ರೆಡ್ಡಿ

Ramalinga Reddy Statement

04-06-2019

ಬೆಂಗಳೂರು: ಒಂದು ಕ‍ಣ್ಣಿಗೆ ಸುಣ್ಣ ಮತ್ತೊಂದು ಕಣ್ಣಿಗೆ ಬೆಣ್ಣೆಯನ್ನು ಹಚ್ಚಬಾರದು ಎಂದು ಮಾಜಿ ಸಚಿವ ಮತ್ತು ಬಿಟಿಎಂ ಲೇಔಟ್‍ನ ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ಹೇಳಿದರು. ಸಚಿವ ಸ್ಥಾನ ಸಿಗದೇ ಇರುವ ಕುರಿತು ಅಸಮಧಾನ ವ್ಯಕ್ತಪಡಿಸಿದ ಅವರು, ನಾನು ವಿಪಕ್ಷಗಳ ಪರವಾಗಿ ಎಂದೂ ಕೆಲಸ ಮಾಡಿಲ್ಲ. ಆದರೆ, ಖಾತೆಗಳನ್ನು ಹಂಚುವ ಸಂದರ್ಭದಲ್ಲಿ ಪಾರದರ್ಶಕತೆ ಇರಬೇಕು ಎಂದರು. ಅನ್ಯಾಯದ ಕುರಿತು ಧ್ವನಿ ಎತ್ತುವುದು ತಪ್ಪಲ್ಲ, ಆದ್ದರಿಂದಲೇ ನಾನು ಈ ಕುರಿತು ಪ್ರತಿಕ್ರಿಯಿಸಿದ್ದೇನೆ ಎಂದರು.

2018ರ ವಿಧಾನಸಭೆ ಚುನಾವಣೆ ನಂತರ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಬೆಂಗಳೂರು ನಗರ ಕೋಟಾದಡಿ ರಾಮಲಿಂಗಾ ರೆಡ್ಡಿಯವರಿಗೆ ಸಚಿವ ಸ್ಥಾನ ಸಿಗಲಿದೆ ಎಂದು ಹೇಳಲಾಗಿತ್ತು. ಆದರೆ, ಅವರಿಗೆ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಅನಂತರ ಜಯನಗರ ವಿಧಾನಸಭೆ ಕ್ಷೇತ್ರದಲ್ಲಿ ತಮ್ಮ ಪುತ್ರಿ ಸೌಮ್ಯಾ ರೆಡ್ಡಿಯವರನ್ನು ಗೆಲ್ಲಿಸುವ ಹೊಣೆಯನ್ನು ಕಾಂಗ್ರೆಸ್ ಅವರಿಗೆ ನೀಡಿತ್ತು. ಅನಂತರ ಕೂಡ ಸಚಿವ ಸ್ಥಾನ ಸಿಗಲಿದೆ ಎಂದು ರಾಮಲಿಂಗಾರೆಡ್ಡಿ ಎಣಿಸಿದ್ದರು. ಆದರೆ, ಇದುವರೆಗೆ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ.


ಸಂಬಂಧಿತ ಟ್ಯಾಗ್ಗಳು

Ramalinga Reddy JDS Congress Minister


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ