ನಾಳೆ ಬಿಜೆಪಿ ಮಹತ್ವದ ಸಭೆ

BJP Meet tomorrow

04-06-2019

ಬೆಂಗಳೂರು: ದೋಸ್ತಿ ಸರ್ಕಾರವನ್ನು ಅಸ್ಥಿರಗೊಳಿಸಿ ಶತಾಯ ಗತಾಯ ಸರ್ಕಾರ ರಚಿಸಬೇಕೆಂಬ ಉಮೇದಿಯಲ್ಲಿರುವ ಬಿಜೆಪಿ ನಾಳೆ ಪದಾಧಿಕಾರಿಗಳು ಹಾಗೂ ಶಾಸಕಾಂಗ ಸಭೆ ಕರೆದಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಪದಾಧಿಕಾರಿ ಮತ್ತು ಶಾಸಕಾಂಗ ಸಭೆಯಲ್ಲಿ ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಸಂಸತ್‍ಗೆ ಆಯ್ಕೆಯಾಗಿರುವ 25 ಮಂದಿ ನೂತನ ಸಂಸದರು ಮತ್ತು ಸಚಿವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿದೆ.

ಸಂಸದರು, ಕೇಂದ್ರ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರು ತಾಲ್ಲೂಕು ಅಧ್ಯಕ್ಷರು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಮಾಜಿ ಸಚಿವರು, ಮಾಜಿ ಶಾಸಕರು ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.


ಸಂಬಂಧಿತ ಟ್ಯಾಗ್ಗಳು

BJP Government Meeting Congress


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ