ಕಬ್ಬು ಬೆಳೆಗಾರರಿಂದ ಬೃಹತ್ ಪ್ರತಿಭಟನೆ

Sugarcane farmers protest in Bengaluru

04-06-2019

ಬೆಂಗಳೂರು : ಕಬ್ಬು ಬೆಳೆಗಾರರಿಗೆ ಬಾಕಿ ಹಣವನ್ನು ತಕ್ಷಣ ಪಾವತಿಸಲು ರಾಜ್ಯ ಸರ್ಕಾರವನ್ನು ಆಗ್ರಹಿಸಿ ರಾಜ್ಯ ರೈತರು ಕಬ್ಬು ಬೆಳೆಗಾರರು ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು.

ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಸಾವಿರಾರು ರೈತರು ಕಬ್ಬು ಬೆಳೆಗಾರರು ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಸೇರಿ ಅಲ್ಲಿಂದ ಫ್ರೀಡಂ ಪಾರ್ಕ್ ವರೆಗೆ ಮೆರವಣಿಗೆ ನಡೆಸಿ ಕೂಡಲೇ ಬಾಕಿ ಹಣವನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದರು.

ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದ ನಡೆಸಿದ ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೈತಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರಬೂರು ಶಾಂತಕುಮಾರ್ ಕಬ್ಬು ಬೆಳೆಗಾರರಿಗೆ ಬಾಕಿಯಿರುವ ಹಣ ಪಾವತಿಸಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು ಹಾಗೂ ಕಾರ್ಖಾನೆ ಮಾಲೀಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದರು.

ರಾಜ್ಯದ 67 ಸಕ್ಕರೆ ಕಾರ್ಖಾನೆಗಳಲ್ಲಿ 2018-19ನೇ ಸಾಲಿನವರೆಗೆ ಅಂದಾಜು 4 ಕೋಟಿ ಟನ್ ಕಬ್ಬನ್ನು ಬಳಸಿಕೊಳ್ಳಲಾಗಿದೆ. ರೈತರಿಗೆ ಅಂದಾಜು 3 ಸಾವಿರ ಕೋಟಿ ಹಣ ಪಾವತಿಸಬೇಕಿದೆ. ಕಬ್ಬು ಸಕ್ಕರೆ ನಿಯಂತ್ರಣ ಕಾಯ್ದೆಯನ್ವಯ ಕಬ್ಬು ಪೂರೈಕೆ ಮಾಡಿದ ರೈತರಿಗೆ 14 ದಿನಗಳಲ್ಲಿ ಹಣ ಪಾವತಿಸಬೇಕೆನ್ನುವ ನಿಯಮ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದರು.


ಸಂಬಂಧಿತ ಟ್ಯಾಗ್ಗಳು

Sugarcane Bengaluru Farmers Protest


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ