ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ: ಮಹಿಳೆ ಸಾವು

Terror attack in Kashmir

05-06-2019

ಶ್ರೀನಗರ: ಕಣಿವೆ ರಾಜ್ಯ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಯೋತ್ಪಾದಕರು ನಡೆಸಿದ ದಾಳಿಗೆ ಒಬ್ಬ ಮಹಿಳೆ ಮೃತಪಟ್ಟು, ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ನರ್ಬಾಲ್ ಗ್ರಾಮದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ‍್ಯದಲ್ಲೇ ಸಾವಿಗೀಡಾಗಿದ್ದಾರೆ. ಆಸ್ಪತ್ರೆಗೆ ಕರೆದೊಯ್ದ ವೇಳೆ ಮಹಿಳೆ ಸಾವಿಗೀಡಾಗಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

ಪವಿತ್ರ ರಂಜಾನ್ ಆಚರಣೆಯಂದೇ ಭಯೋತ್ಪಾದಕರು ದಾಳಿ ನಡೆಸಿದ್ದು, ಕಾಶ್ಮೀರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.


ಸಂಬಂಧಿತ ಟ್ಯಾಗ್ಗಳು

Kashmir Security Terrorist Jammu


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ