ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ದುರುಳ !

Kannada News

08-06-2017

ಮೈಸೂರು:-  ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ, ಗರ್ಭಪಾತ ಮಾಡಿಸಿದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಪಿರಿಯಾಪಟ್ಟಣ ಗ್ರಾಮವೊಂದರಲ್ಲಿ ನಡೆದಿದೆ. ಸಂತೋಷ್ ಅಲಿಯಾಸ್ ತಮ್ಮಯ್ಯ (22) ಬಂಧಿತ ಆರೋಪಿ. ಈತ ಅದೇ ಗ್ರಾಮದ 16 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದಾನೆ. ಬಾಲಕಿ ಗರ್ಭಿಣಿ ಆಗುತ್ತಿದ್ದಂತೆ ಉಲ್ಟಾ ಹೊಡೆದ ಯುವಕ ಗರ್ಭಪಾತ ಮಾಡಿಸಿಕೊಂಡರೆ ಮದುವೆ ಆಗುವುದಾಗಿ ಭರವಸೆ ನೀಡಿದ್ದ ಎನ್ನಲಾಗಿದೆ. ಈತನ ಮಾತನ್ನು ನಂಬಿದ ಬಾಲಕಿ ಮನೆಗೆ ತೆರಳಿ ಗರ್ಭಪಾತ ಮಾತ್ರೆಗಳನ್ನು ನುಂಗಿ, ತಕ್ಷಣ ಪೋಷಕರ ಎದುರಿನಲ್ಲಿಯೇ ಕುಸಿದು ಬಿದ್ದಿದ್ದಳು. ಗಾಬರಿಯಾದ ಅವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಪಡೆದ ನಂತರ ಯುವತಿ ನಡೆದ ಘಟನೆಯನ್ನೆಲ್ಲ ತನ್ನ ಪೋಷಕರಿಗೆ ಹೇಳಿದ್ದಾಳೆ. ಈ ಸಂಬಂಧ ಪೋಷಕರು ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು,  ಪೊಲೀಸ್ ಆರೋಪಿಯನ್ನು ಬಂಧಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ