ಎಚ್. ವಿಶ್ವನಾಥ್ ಮನವೊಲಿಕೆಗೆ ಯತ್ನ

H Vishwanath

06-06-2019

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶಾಸಕ ಎಚ್.ವಿಶ್ವನಾಥ್ ಅವರ ಮನವೊಲಿಸುವ ಪ್ರಯತ್ನ ಮುಂದುವರೆದಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ನೀಡಿರುವ ರಾಜೀನಾಮೆ ಅಂಗೀಕಾರವೂ ಆಗಿಲ್ಲ. ಇಲ್ಲವೇ ವಾಪಸ್ ಪಡೆದಿಲ್ಲ. ಮೂರು ದಿನ ಕಳೆದರೂ ಈ ವಿಚಾರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.

ವಿಶ್ವನಾಥ್ ಕೂಡ ತಮ್ಮ ನಿಲುವಿಗೆ ಅಂಟಿಕೊಂಡಿರುವುದರಿಂದ ಜೆಡಿಎಸ್ ವರಿಷ್ಠರು ಮತ್ತೊಮ್ಮೆ ಅವರನ್ನು ಭಾವನಾತ್ಮಕವಾಗಿ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ. ಮನವಿಗೆ ಮಣಿಯದೆ ತಮ್ಮ ನಿಲುವಿಗೆ ಅಂಟಿಕೊಂಡಿದ್ದ ವಿಶ್ವನಾಥ್ ಅವರು ಕಾಲಾವಕಾಶವನ್ನು ಕೋರಿದ್ದಾರೆ ಎನ್ನಲಾಗಿದೆ. ನಾಳೆ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳಿಗೆ ಜೆಡಿಎಸ್ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಆ ಕಾರ್ಯಕ್ರಮದಲ್ಲೂ ವಿಶ್ವನಾಥ್ ತಮ್ಮ ನಿಲುವನ್ನು ಬದಲಿಸಿ ರಾಜ್ಯಾಧ್ಯಕ್ಷರಾಗಿ ಮುಂದುವರೆಯುವಂತೆ ಓಲೈಸುವ ಸಾಧ್ಯತೆಗಳಿವೆ.

ಅಲ್ಲದೆ ನಾಳೆ ಜೆಡಿಎಸ್ ಪಕ್ಷದ ಹಿರಿಯ ನಾಯಕರು ವಿಶ್ವನಾಥ್ ಅವರೊಂದಿಗೆ ಮತ್ತೊಮ್ಮೆ ಸಮಾಲೋಚನೆ ನಡೆಸಿ ಸಂದಿಗ್ಧ ರಾಜಕೀಯ ಪರಿಸ್ಥಿತಿಯಲ್ಲಿ ರಾಜ್ಯಾಧ್ಯಕ್ಷರಾಗಿ ಮುಂದುವರೆಯುವಂತೆ ಮನವೊಲಿಸುವ ಪ್ರಯತ್ನ ನಡೆಸಲಿದ್ದಾರೆ.


ಸಂಬಂಧಿತ ಟ್ಯಾಗ್ಗಳು

H Vishwanath State President JDS Resignation


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ