ಕಾಂಗ್ರೆಸ್ ನಾಯಕರಿಗೆ ಹೆಚ್.ಕೆ.ಪಾಟೀಲ್ ಪತ್ರ

HK Patil wrote a letter to Congress Leaders

06-06-2019

ಬೆಂಗಳೂರು : ಮಾಜಿ ಸಚಿವ ರಾಮಲಿಂಗಾರೆಡ್ಡಿ, ಸಚಿವ ರೋಷನ್ ಬೇಗ್ ಅವರ ಅಸಮಾಧಾನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ರಾಜ್ಯದ ಹಿರಿಯ ನಾಯಕರ ಸಭೆ ಕರೆಯಬೇಕು ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ಎಂದು ಮನವಿ ಮಾಡಿದ್ದಾರೆ. ಕಾಂಗ್ರೆಸ್ ವರಿಷ್ಠರಿಗೆ ಪತ್ರ ಬರೆದಿರುವ ಅವರು, ಹಿರಿಯ ನಾಯಕರು ಅಸಮಾಧಾನ ಹೊರಹಾಕುತ್ತಿರುವ ಸಂದರ್ಭದಲ್ಲಿ ತಕ್ಷಣ ಮಧ್ಯಪ್ರವೇಶಿಸಿ ಹಿರಿಯ ಮುಖಂಡರೊಂದಿಗೆ ಸಮಾಲೋಚನೆ ನಡೆಸಬೇಕು. ಸಮಸ್ಯೆಗೆ ಪರಿಹಾರ ಕಂಡುಹಿಡಿಯಬೇಕು ಎಂದು ಹೇಳಿದ್ದಾರೆ. ಪ್ರಸ್ತುತ ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ಇದನ್ನು ಪರಿಹರಿಸಲು ವರಿಷ್ಠರು ಮುಂದಾಗಬೇಕು. ಇದಕ್ಕಾಗಿ ತಕ್ಷಣವೇ ಉನ್ನತ ಮಟ್ಟದ ಸಭೆ ಕರೆಯಬೇಕು ಎಂದಿದ್ದಾರೆ.


ಸಂಬಂಧಿತ ಟ್ಯಾಗ್ಗಳು

H K Patil Ramalinga Reddy Congress Leaders


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ