ದುನಿಯಾ ವಿಜಿಗೆ ಶುಭ ಕೋರಿದ ಸಿದ್ದರಾಮಯ್ಯ

Siddaramaih wishes to Duniya Viji

06-06-2019

ಬೆಂಗಳೂರು:ದುನಿಯಾ ವಿಜಯ್ ನಿರ್ದೇಶಿಸುತ್ತಿರುವ ಸಲಗ ಚಿತ್ರದ ಮುಹೂರ್ತ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕ್ಲಾಪ್ ಮಾಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಜೊತೆಗೆ, ನಟನಾಗಿ ವಿಜಯ್ ಅವರ ಅಭಿನಯವನ್ನು ನೋಡಿದ್ದೇನೆ. ಸಾಕಷ್ಟು ಪ್ರತಿಭಾವಂತ ಕೂಡ. ಈಗವರು ನಿರ್ದೇಶನಕ್ಕೆ ಇಳಿದಿದ್ದಾರೆ. ಚಿತ್ರೀಕರಣ ಯಶಸ್ವಿಯಾಗಲಿ, ಚಿತ್ರ ಪ್ರೇಕ್ಷಕರ ಪ್ರೀತಿ ಗಳಿಸಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಇದರೊಂದಿಗೆ ಮುಹೂರ್ತ ಸಮಾರಂಭದ ಫೋಟೋವನ್ನು ಕೂಡ ಹಂಚಿಕೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Duniya Viji Director Siddaramaih Tweet


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ