‘ನಿಫಾ’ ಹರಡದಂತೆ ರಾಜ್ಯದಲ್ಲಿ ಕಟ್ಟೆಚ್ಚರ

Nipah Virus

06-06-2019

ಬೆಂಗಳೂರು: ಮಹಾಮಾರಿ ನಿಫಾ ವೈರಸ್ (ಬಾವಲಿ) ಜ್ವರ ವೈರಸ್‍ನ ಸೋಂಕು ರಾಜ್ಯದಲ್ಲಿ ಕಾಣಿಸಿಕೊಳ್ಳದಂತೆ ಕೇರಳ ಗಡಿಭಾಗದ 8 ಜಿಲ್ಲೆಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ನೆರೆಯ ಕೇರಳದಲ್ಲಿ ಹರಡಿರುವ ನಿಫಾ ವೈರಸ್ ಕೇರಳಕ್ಕೆ ಹೊಂದಿಕೊಂಡಿರುವ ರಾಜ್ಯದ ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಾಮರಾಜನಗರ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಿದೆ.

ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಾಮರಾಜನಗರ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕೂಡಲೇ ಪಶುಸಂಗೋಪನಾ ಇಲಾಖೆ ಅಧಿಕಾರಿಗಳನ್ನೊಳಗೊಂಡ ಸಮನ್ವಯ ಸಮಿತಿ ಸಭೆ ನಡೆಸಿ ನಿಫಾ ಸೋಂಕು ಹರಡದಂತೆ ಕ್ರಮಕೈಗೊಳ್ಳಬೇಕೆಂದು ಸೂಚಿಸಿದೆ.

ಕೇರಳದಲ್ಲಿ 23 ವರ್ಷದ ವಿದ್ಯಾರ್ಥಿಗೆ ನಿಫಾ ಜ್ವರ ತಗುಲಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ನಿಗಾ ವಹಿಸುವಂತೆ ಎಲ್ಲ 8 ಜಿಲ್ಲೆಗಳಿಗೆ ಸೂಚಿಸಲಾಗಿದೆ. ನಿಫಾ ವೈರಸ್ ಸೋಂಕು ತಗುಲಿದ ವ್ಯಕ್ತಿಗಳನ್ನು ಗುರುತಿಸಿ ಅವರಿಗಾಗಿ 2 ಹಾಸಿಗೆಗಳೂ ಸೇರಿದಂತೆ ಎಲ್ಲ ರೀತಿಯ ಅಗತ್ಯಕ್ರಮ ಕೈಗೊಳ್ಳುವಂತೆ ಆದೇಶಿಸಿದೆ.

ಕೇರಳ ರಾಜ್ಯಕ್ಕೆ ತೆರಳುವವರು ಮಾಸ್ಕ್ ಧರಿಸಿ ತೆರಳುವಂತೆ ಸೂಚಿಸಲಾಗಿದೆ. ಎರ್ನಾಕುಲಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ದಾಖಲಾಗಿರುವ ವಿದ್ಯಾರ್ಥಿಗೆ ನಿಫಾ ವೈರಸ್ ಸೋಂಕು ತಗುಲಿದೆ. ಹೀಗಾಗಿ, ರಾಜ್ಯದ ಗಡಿಭಾಗಗಳಲ್ಲಿ ಭಾರಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ನಿರ್ದೇಶನ ನೀಡಿದೆ.

1998ರಲ್ಲಿ ದಕ್ಷಿಣ ಏಷ್ಯಾದಲ್ಲಿ ಮಹಾಮಾರಿ ನಿಫಾ 477 ಜನರಿಗೆ ಸೋಂಕು ತಗುಲಿ 248 ಜನರು ಮೃತಪಟ್ಟಿದ್ದರು. 2018ರಲ್ಲಿ 18 ನಿಫಾ ಪ್ರಕರಣಗಳು ಪತ್ತೆಯಾಗಿತ್ತು. ಈ ಪೈಕಿ 16 ಮಂದಿ ಕಲ್ಲಿಕೋಟೆ ಮತ್ತು ಮಲಾಪುರಂ ಜಿಲ್ಲೆಗಳಲ್ಲಿ ಮೃತಪಟ್ಟಿದ್ದರು.


ಸಂಬಂಧಿತ ಟ್ಯಾಗ್ಗಳು

Nipah Karnataka Kerala Virus


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ