ಸರ್ಕಾರಿ ನೌಕರರ ವರ್ಗಾವಣೆಗೆ ಕೌನ್ಸಿಲಿಂಗ್: ಸಚಿವ ಕೃಷ್ಣಬೈರೇಗೌಡ

Krishna Byre Gowda statement

06-06-2019

ಬೆಂಗಳೂರು: ರಾಜ್ಯ ಸರ್ಕಾರಿ ಗ್ರೂಪ್ ‘ಸಿ’ ಮತ್ತು ‘ಡಿ’ ದರ್ಜೆಯ ನೌಕರರ ವರ್ಗಾವಣೆಯಲ್ಲಿ ಪಾರದರ್ಶಕತೆ ತರಲು ಕೌನ್ಸಿಲಿಂಗ್ ವ್ಯವಸ್ಥೆ ಜಾರಿಗೊಳಿಸಲು ಕರಡು ಕಾನೂನಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

ಅವರು ಇಂದು ಸಚಿವ ಸಂಪುಟ ಸಭೆಯ ನಂತರ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಗ್ರೂಪ್ ‘ಸಿ’ ಮತ್ತು ‘ಡಿ’ ದರ್ಜೆಯ ನೌಕರರು ವರ್ಗಾವಣೆ ಸಮಯದಲ್ಲಿ ಅನೇಕ ಅನಾಕೂಲತೆಗಳನ್ನು ಎದರಿಸುತ್ತಿದ್ದಾರೆ. ಅದನ್ನು ನಿವಾರಿಸಲು ನಿಟ್ಟಿನಲ್ಲಿ ಕೌನ್ಸಲಿಂಗ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ ಇದರ ಮೂಲಕ ಇಡೀ ರಾಜ್ಯದಲ್ಲಿ ಜಿಲ್ಲಾವಾರು ಹಾಲಿ ಖಾಲಿ ಇರುವ ಹುದ್ದೆಗಳ ಸಮಾನ ಹಂಚಿಕೆಗೆ ಅನುಕೂಲವಾಗುತ್ತದೆ ಎಂದು ಅವರು ಹೇಳಿದರು. ವರ್ಗಾವಣೆ ಸಮಯದಲ್ಲಿ ವೃಂದವಾರು ಹಂಚಿಕೆ, ಕನಿಷ್ಠ ಸೇವಾವಧಿಯನ್ನು ಸಹ ಪರಿಗಣಿಸಲಾಗುತ್ತದೆ ಎಂದು ಅವರು ತಿಳಿಸಿದರು. ಈ ಸಂಬಂಧ ವಿಧೇಯಕವನ್ನು ಮುಂದಿನ ವಿಧಾನಮಂಡಲದಲ್ಲಿ ಮಂಡಿಸಲಾಗುತ್ತದೆ ಎಂದು ಹೇಳಿದರು.


ಸಂಬಂಧಿತ ಟ್ಯಾಗ್ಗಳು

Krishna Byre Gowda State government Counselling Karnataka


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ