ಆದಾಯ ತೆರಿಗೆ ಅಧಿಕಾರಿ ವಿರುದ್ಧ ಯವತಿ ದೂರು

Police case

06-06-2019

ಬೆಂಗಳೂರು: ಪ್ರೀತಿಸಿ, ಮದುವೆ ಆಗುವುದಾಗಿ ನಂಬಿಸಿ ಆದಾಯ ತೆರಿಗೆ ಅಧಿಕಾರಿ ಸಂಭ್ರಮ್ ಎಂಬುವವರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಯವತಿಯೊಬ್ಬರು ವಿಧಾನ ಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಗರದ ಇನ್ ಫ್ರೈಟಿ ರಸ್ತೆಯಲ್ಲಿರುವ ಆದಾಯ ತೆರಿಗೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂತ್ರಸ್ಥ ಮಹಿಳೆಗೆ 2017ರಲ್ಲಿ ಅದೇ ಕಚೇರಿಯಲ್ಲಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿ ಹೆಚ್.ಜಿ. ಸಂಭ್ರಮ್ ಎಂಬುವವರ ಪರಿಚಯವಾಗಿತ್ತು. ಬಳಿಕ ಸ್ನೇಹ ಪ್ರೀತಿಗೆ ತಿರುಗಿತ್ತು. ಮದುವೆಯಾಗುವುದಾಗಿ ನಂಬಿಸಿ ಸಂಭ್ರಮ್ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದರು ಎನ್ನಲಾಗಿದ್ದು, ಯುವತಿ ಮದುವೆ ಮಾಡಿಕೊಳ್ಳುವಂತೆ ಕೇಳಿದಾಗ ಸಂಭ್ರಮ್ ಬೆಂಗಳೂರಿನಿಂದ ಮಡಿಕೇರಿಗೆ ವರ್ಗಾವಣೆ ಪಡೆದು ಪರಾರಿಯಾಗಿದ್ದಲ್ಲದೆ ತಮ್ಮನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕುತ್ತಿದ್ದಾರೆಂದು ಸಂತ್ರಸ್ಥೆ ದೂರು ನೀಡಿದ್ದಾರೆ. ಸದ್ಯ ಪೊಲೀಸರು, ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Income Tax Police case Rape Bengaluru


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ