ಮುಂಗಾರು ಮಳೆಯಿಂದ ಗರಿಗೆದರಿದ ಕೃಷಿ ಚಟುವಟಿಕೆ

Rain

07-06-2019

ರಾಜ್ಯದಲ್ಲಿ ಮುಂಗಾರು ಉತ್ತಮ ಆರಂಭ ಪಡೆದುಕೊಂಡಿದ್ದು, ರೈತಾಪಿ ವರ್ಗದಲ್ಲಿ ಸಂತಸ ಮೂಡಿಸಿದೆ. ಕಳೆದೆರಡು ದಿನಗಳಿಂದ ರಾಜ್ಯದ ಹಲವಾರು ಕಡೆಗಳಲ್ಲಿ ಉತ್ತಮ ಮಳೆಯಾಗಿದ್ದು ಕೃಷಿ ಚಟುವಟಿಕೆ ಗರಿಗೆದರುವಂತಾಗಿದೆ.

ಜೂನ್ 10ರವರೆಗೂ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು ಮತ್ತಷ್ಟು ಹರುಷ ಮೂಡಿಸಿದೆ. ಶುಕ್ರವಾರ ಮುಂಜಾನೆಯವರೆಗೆ ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ ಎಂದು ಇಲಾಖೆ ತಿಳಿಸಿದೆ.

ಜೂನ್ 8, 9 ಹಾಗೂ 10ರಂದು ಕೂಡ ಭಾರಿ ವರ್ಷಧಾರೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಉಳಿದಂತೆ, ಜೂನ್ 9ರಂದು ಮಲೆನಾಡು ಪ್ರದೇಶಗಳಾದ ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳು, ಜೂನ್ 10ರಂದು ಚಿಕ್ಕಮಗಳೂರು ಜಿಲ್ಲೆಯ ಒಳನಾಡು ಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಸಂಬಂಧಿತ ಟ್ಯಾಗ್ಗಳು

Rain Farmers Weather Report Agriculture


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ