ಯಡಿಯೂರಪ್ಪ ಬರ ಅಧ್ಯಯನ

B S Yadiyurappa

07-06-2019

ಕಳೆದ ಹಲವು ದಿನಗಳಿಂದ ಬಿಡುವಿಲ್ಲದ ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿದ್ದ ಬಿಜೆಪಿ ನಾಯಕರು, ಇದೀಗ ಏಕಾಎಕಿ ಮೈಚಳಿ ಬಿಟ್ಟವರಂತೆ ರಾಜ್ಯ ಪ್ರವಾಸ ಆರಂಭಿಸಿದ್ದಾರೆ. ರಾಜ್ಯದ ಬರಪೀಡಿತ ಪ್ರದೇಶದಲ್ಲಿ ಪ್ರವಾಸ ಕೈಗೊಂಡು, ಪರಿಹಾರ ಕಾಮಗಾರಿಗಳ ಪ್ರಗತಿ ಪರಿಶೀಲನೆ ಮತ್ತು ಜನರ ಅಹವಾಲು ಅಲಿಸಲಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ 3 ದಿನಗಳ ಕಾಲ ಯಡಿಯೂರಪ್ಪ ಬರ ಅಧ್ಯಯನ ಕೈಗೊಂಡಿದ್ದಾರೆ. ಬಿಎಸ್‍ವೈ ಇಂದು ಬಾಗಲಕೋಟೆಯ ಬದಾಮಿ ತಾಲೂಕಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ಹುನಗುಂದ ತಾಲೂಕಿನಲ್ಲಿ ಬರ ಪರಿಶೀಲನೆ ಮಾಡಿದ ಬಳಿಕ ರಾತ್ರಿ ಕೊಪ್ಪಳದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಶನಿವಾರ ಕೊಪ್ಪಳ, ರಾಯಚೂರಿನ ಲಿಂಗಸುಗೂರಿನಲ್ಲಿ ಪರಿಶೀಲನೆ ಮಾಡಲಿದ್ದಾರೆ. ಜೂನ್ 9ರಂದು ಗುರುಮಿಠಕಲ್ ಕ್ಷೇತ್ರದಲ್ಲಿ ಬರ ಅಧ್ಯಯನ ಮಾಡಿ ವಾಪಸ್ಸಾಗಲಿದ್ದಾರೆ.


ಸಂಬಂಧಿತ ಟ್ಯಾಗ್ಗಳು

B S Yadiyurappa BJP Drought North Karnataka


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ