ಮೈತ್ರಿ ಸರ್ಕಾರ ಸಾಕು ಎಂದ ಚಲುವರಾಯಸ್ವಾಮಿ

Cheluvaraya swamy Statement

07-06-2019

ರಾಜ್ಯ ಕಾಂಗ್ರೆಸ್ ನಾಯಕತ್ವದ ಕುರಿತು ಹಲವು ನಾಯಕರು ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಇದೀಗ ಮಾಜಿ ಸಚಿವ ಚಲುವರಾಯಸ್ವಾಮಿ, ಸಮ್ಮಿಶ್ರ ಸರ್ಕಾರ ಸಾಕು,‌ ಪ್ರತಿಪಕ್ಷದಲ್ಲಿ ಕೂರೊಣಾ ಎಂದು ವರಿಷ್ಠರನ್ನು ಆಗ್ರಹಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ “ಎಲೆಕ್ಷನ್‍ಗೆ ಹೋಗೋಣ ಇಲ್ಲ ವಿರೋಧ ಪಕ್ಷವಾಗಿ ಕೂರೋಣ” ಎಂದು ಬರೆದು ಈ ಮೂಲಕ ತಮ್ಮ ನಿರ್ಧಾರವನ್ನು ಚೆಲುವರಾಯಸ್ವಾಮಿ ತಿಳಿಸಿದ್ದಾರೆ.

ಮೈತ್ರಿ ವಿಚಾರದಲ್ಲಿ ರಾಷ್ಟ್ರದ ನಾಯಕರು ತೆಗೆದುಕೊಂಡಿರುವ ತೀರ್ಮಾನಕ್ಕೆ ನಾನು ಬದ್ಧ. ಆದರೆ ಇದೇ ರೀತಿ ಮುಂದುವರಿದರೆ ಕಾಂಗ್ರೆಸ್ ಪಕ್ಷ ಬಹಳ ಕಷ್ಟದ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ನಮ್ಮ ನಾಯಕರು ಇದನ್ನ ಸರಿಪಡಿಸಬೇಕು ಇಲ್ಲ, ಒಂದು ಪೂರ್ಣ ಪ್ರಮಾಣದ ತೀರ್ಮಾನ ತೆಗೆದುಕೊಳ್ಳಬೇಕು. ಆಗ್ಲಿಲ್ಲ ಅಂದರೆ ಮುಂದೆ ಪಕ್ಷವನ್ನು ಈ ಸ್ಥಿತಿಗೆ ಬರದೆ ಇರುವಂತೆ ನೋಡಿಕೊಳ್ಳವುದಕ್ಕೆ ಪಕ್ಷದ ಎಲ್ಲ ಮುಖಂಡರು ಜವಾಬ್ದಾರಿ ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಜೆಡಿಎಸ್ ದೋಸ್ತಿಯಿಂದ ಕಾಂಗ್ರೆಸ್ ಪಕ್ಷದ ಅಸ್ತಿತ್ವಕ್ಕೆ ಧಕ್ಕೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ವಿರುದ್ಧ ಚೆಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Cheluvaraya swamy JDS Congress Government


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ