ಆಂಧ್ರಕ್ಕೆ ಐವರು ಉಪ ಮುಖ್ಯಮಂತ್ರಿಗಳು

Andra News

07-06-2019

ಹೈದರಾಬಾದ್: ಆಂಧ್ರ ಸಿಎಂ ಜಗನ್ಮೋಹನ್ ರೆಡ್ಡಿಯವರು ಐದು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಲು ನಿರ್ಧರಿಸಿದ್ದಾರೆ. ವೈಎಸ್‍ಆರ್ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆಯನ್ನು ತಮ್ಮ ಮನೆಯಲ್ಲಿ ನಡೆಸಿದ ರೆಡ್ಡಿ ಈ ಮಹತ್ವದ ಮತ್ತು ಹಿಂದೆಂದೂ ಕಂಡು ಕೇಳರಿಯದ ನಿರ್ಧಾರವನ್ನು ಪ್ರಕಟಿಸಿದರು.

ಇನ್ನು ತಮ್ಮ ನಿರ್ಧಾರದ ಕುರಿತು ಜಗನ್ಮೋಹನ್, ಸಚಿವರ ದಕ್ಷತೆಯನ್ನು ಆಧರಿಸಿ 2.5 ವರ್ಷಗಳ ನಂತರ ಸಚಿವ ಸಂಪುಟವನ್ನು ಪುನಾರಚನೆ ಮಾಡಲಾಗುವುದು ಎಂದು ತಮ್ಮ ಶಾಸಕರಿಗೆ ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ವೈಎಸ್‍ಆರ್‍ಸಿ ಶಾಸಕ ಎಂ ಎಂ ಶೇಕ್, ನಮಗೆ ತುಂಬಾ ಸಂತೋಷವಾಗಿದೆ. ಆಂಧ್ರಪ್ರದೇಶದಲ್ಲಿ 5 ಉಪಮುಖ್ಯಮಂತ್ರಿಗಳು ಇರಲಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಮತ್ತು ಕಾಪು ಸಮುದಾಯಕ್ಕೆ ಅವಕಾಶ ಸಿಗಲಿದೆ. ಜಗನ್ಮೋಹನ್ ರೆಡ್ಡಿಯವರು ಭಾರತದ ಅತ್ಯುತ್ತಮ ಸಿಎಂ ಎಂದು ಸಾಬೀತುಪಡಿಸಿದ್ದಾರೆ ಎಂದು ಸಂತಸ ಹಂಚಿಕೊಂಡರು.

ಎನ್ ಚಂದ್ರಬಾಬು ನಾಯ್ಡು ಅವರು ಕಾಪು ಮತ್ತು ಹಿಂದುಳಿದ ವರ್ಗಕ್ಕೆ ಡಿಸಿಎಂ ಪಟ್ಟ ನೀಡಿದ್ದರು. ಕರ್ನಾಟಕದಲ್ಲಿ ಕೂಡ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಕ್ಕೆ ಡಿಸಿಎಂ ಪಟ್ಟವನ್ನು ನೀಡಲಾಗಿತ್ತು.


ಸಂಬಂಧಿತ ಟ್ಯಾಗ್ಗಳು

Andhra pradesh DCM CM Jaganmohan Reddy MLA


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ