ಕೆ.ಎಸ್. ಈಶ್ವರಪ್ಪ ವಿರುದ್ಧ ಅಕ್ರಮ ಆಸ್ತಿ ಆರೋಪ ? ದೂರು ಸಲ್ಲಿಕೆ !

Kannada News

08-06-2017

ಬೆಂಗಳೂರು:-  ಕೆ.ಎಸ್. ಈಶ್ವರಪ್ಪ ನೂರಾರು ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಶಿವಮೊಗ್ಗದ ವಕೀಲ, ವಿನೋದ್ ಎಂಬುವರು  ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದಾರೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯ ಹಾಗೂ ವಿದೇಶದಲ್ಲೂ ಈಶ್ವರಪ್ಪ ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿದ್ದಾರೆ. ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಮತ್ತು ಮನಿ ಲಾಂಡರಿಂಗ್ ಕಾಯ್ದೆಯ ಅಡಿಯಲ್ಲಿ ತನಿಖೆ ನಡೆಸಬೇಕೆಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಆಗಮಿಸಿದ್ದ ವಕೀಲ ವಿನೋದ್ ದೂರು ನೀಡಿದ್ದಾರೆ. ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಕೆ.ಎಸ್. ಈಶ್ವರಪ್ಪ ಕರ್ನಾಟಕ ಸೇರಿ ಬೇರೆ ಬೇರೆ ರಾಜ್ಯಗಳಲ್ಲಿ  ಆಸ್ತಿ ಮಾಡಿದ್ದಾರೆ. ಕರ್ನಾಟಕದಲ್ಲಿ ಅಷ್ಟೇ ಅಲ್ಲದೇ ಅಬುದಾಬಿಯಲ್ಲೂ ಆಸ್ತಿ ಮಾಡಿದ್ದಾರೆ. ಮನಿ ಲಾಂಡರಿಂಗ ಆಕ್ಟ್ ಅಡಿಯಲ್ಲಿ ದೂರು ನೀಡಿದ್ದೇನೆ ಎಂದರು. ಅಲ್ಲದೆ, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಯಡಿ ಯಲ್ಲಿಯೂ ದೂರು ನೀಡಿದ್ದೇನೆ. ಈಶ್ವರಪ್ಪ ಹೊರ ರಾಜ್ಯದಲ್ಲಿ ಬೇನಾಮಿ ಕಂಪನಿ ಮಾಡಿದ್ದಾರೆ. ಸಾವಿರಾರು ಕೋಟಿ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ. ತಮ್ಮ ಮಗ, ಹೆಣ್ಣುಮಕ್ಕಳು ಮತ್ತು ಅವರ ಅಳಿಯಂದಿರ ಹೆಸರಿನಲ್ಲೂ ಈಶ್ವರಪ್ಪ ಅಕ್ರಮ ಆಸ್ತಿ ಮಾಡಿದ್ದಾರೆ ಎಂದು ವಕೀಲ ಆರೋಪಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ