ಕೌಟುಂಬಿಕ ಕಲಹ- ಐಟಿಪಿಎಲ್ ಉದ್ಯೋಗಿ ಆತ್ಮಹತ್ಯೆ

ITPL Employee Suicide

07-06-2019

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಐಟಿಪಿಎಲ್ ಉದ್ಯೋಗಿ ನೇಣಿಗೆ ಶರಣಾಗಿರುವ ದುರ್ಘಟನೆ ಕೆಆರ್ ಪುರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮೇಡಹಳ್ಳಿಯಲ್ಲಿ ನಡೆದಿದೆ.

ಮೇಡಹಳ್ಳಿಯ ವಿನಾಯಕ ಲೇಔಟ್‍ನ ದಿನೇಶ್ ಕುಮಾರ್ (31)ಎಂದು ಗುರುತಿಸಲಾಗಿದೆ. ಐಟಿಪಿಎಲ್‍ನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ದಿನೇಶ್ ಕುಮಾರ್ ರಾತ್ರಿ 7ರ ವೇಳೆ ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದಾರೆ. ಅದಾದ ಕೆಲವೇ ಸಮಯದಲ್ಲಿ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಎಷ್ಟುಬಾರಿ ಮೊಬೈಲ್ ಕರೆ ಮಾಡಿದರೂ ಸ್ವೀಕರಿಸದಿದ್ದರಿಂದ ಆತಂಕಗೊಂಡು ತವರಿಗೆ ಹೋಗಿದ್ದ ಪತ್ನಿ ಪಕ್ಕದ ಮನೆಯವರಿಗೆ ವಿಷಯ ತಿಳಿಸಿದ್ದಾರೆ.

ಪಕ್ಕದ ಮನೆಯವರು ಬಾಗಿಲು ಮುರಿದು ಒಳಹೋಗಿ ನೋಡಿದಾಗ ದಿನೇಶ್ ಕುಮಾರ್ ನೇಣಿಗೆ ಶರಣಾಗಿದ್ದರು. ಪ್ರಕರಣ ದಾಖಲಿಸಿರುವ ಕೆ.ಆರ್. ಪುರಂ ಪೊಲೀಸರು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಿನೇಶ್ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

ITPL Family Employee Suicide


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ