ಸೆನೆಗಲ್ ನಿಂದ ರವಿ ಪೂಜಾರಿ ಪರಾರಿ

Ravi Pujari jumps jail, Flees Senegal?

10-06-2019

ಕುಖ್ಯಾತ ಭೂಗತ ಪಾತಕಿ, ಹಲವಾರು ಪ್ರಕರಣಗಳಲ್ಲಿ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯದ ಪೊಲೀಸ್ ರಿಗೆ ಬೇಕಾಗಿದ್ದ ರವಿಪೂಜಾರಿ ಜೈಲಿನಿಂದ ಪರಾರಿಯಾಗಿದ್ದಾನೆ. ನಕಲಿ ಪಾಸ್‍ಪೋರ್ಟ್ ಆರೋಪದಡಿ ಪಶ್ಚಿಮ ಆಫ್ರಿಕಾದ ಸೆನಗಲ್‍ನಲ್ಲಿ 4 ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ರಾಜ್ಯದ ಕರಾವಳಿ ಮೂಲದ ಭೂಗತ ದೊರೆ ರವಿ ಪೂಜಾರಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಹೇಗೆ ಪರಾರಿಯಾಗಿದ್ದಾನೆ ಎನ್ನುವುದಕ್ಕೆ ಸ್ಪಷ್ಟತೆ ಸಿಕ್ಕಿಲ್ಲ. ನ್ಯಾಯಾಲಯದಿಂದ ಜಾಮೀನು ಪಡೆದು ಹೊರನಡೆದಿದ್ದ ರವಿ ಪೂಜಾರಿ. ಈ ಸಂದರ್ಭವನ್ನೇ ಬಳಸಿಕೊಂಡು ಸೆನೆಗಲ್ ನಿಂದ ಪರಾರಿಯಾಗಿದ್ದಾನೆ ಎಂದು ಸೆನೆಗಲ್ ಪತ್ರಿಕೆಗಳು ವರದಿ ಮಾಡಿವೆ.
ಹಲವಾರು ಪ್ರಕರಣಗಳಲ್ಲಿ ಭಾರತಕ್ಕೆ ಬೇಕಾಗಿದ್ದ ರವಿ ಪೂಜಾರಿಯನ್ನು ಕಾನೂನು ಹೋರಾಟದಡಿ ಗಡೀಪಾರು ಮಾಡುವ ಭಾರತದ ಪೊಲೀಸರ ಪ್ರಯತ್ನಕ್ಕೆ ಇದರಿಂದ ಹಿನ್ನಡೆಯಾಗಿದೆ. ರವಿ ಪೂಜಾರಿಯನ್ನು ಕರೆತರಲು ಬೆಂಗಳೂರು, ಮುಂಬೈ ಪೊಲೀಸರು ಕಳೆದ 3 ತಿಂಗಳಿಂದ ಸೆನಗಲ್‍ನಲ್ಲಿ ಭಾರೀ ಪ್ರಯತ್ನ ನಡೆಸಿದ್ದರು ಆತನ ವಿರುದ್ಧ ದಾಖಲಾಗಿರೋ ಕೇಸ್‍ಗಳು, ಸಾಕ್ಷ್ಯಾಧಾರಗಳನ್ನು ಫ್ರೆಂಚ್ ಭಾಷೆಗೆ ಭಾಷಾಂತರ ಮಾಡಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ಅಂತಿಮ ಹಂತದಲ್ಲಿತ್ತು.


ಸಂಬಂಧಿತ ಟ್ಯಾಗ್ಗಳು

Ravi Pujari Don Underworld Africa


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ