ಭಾರಿ ಮಳೆಯ ಮುನ್ನೆಚ್ಚರಿಕೆ

Rain

10-06-2019

ಕೇರಳಕ್ಕೆ ಪ್ರವೇಶಿಸಿರುವ ಮುಂಗಾರು ಮಳೆ ಆರಂಭದಲ್ಲೇ ಆರ್ಭಟ ತೋರಿದೆ. ಕೊಚ್ಚಿಗೆ ಅಪ್ಪಳಿಸಿರುವ ಮುಂಗಾರು ಮಳೆ ಕೋಜಿಕ್ಕೋಡ್‍ನಲ್ಲಿ ಆತಂಕ ಸೃಷ್ಟಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ 9 ಜಿಲ್ಲೆಗಳಲ್ಲಿ ಕಟ್ಟೆಚ್ಚರ ಹೊರಡಿಸಲಾಗಿದೆ. ಕರ್ನಾಟಕಕ್ಕೂ ಮುಂಗಾರು ಪ್ರವೇಶವಾಗುತ್ತಿರುವ ಸಮಯದಲ್ಲಿ ಚಂಡಮಾರುತದ ಭೀತಿ ಆತಂಕ ಸೃಷ್ಟಿಸಿದೆ
ಅರಬ್ಬಿ ಸಮುದ್ರದ ಆಗ್ನೇಯ ಭಾಗದ ಲಕ್ಷದ್ವೀಪದ ಬಳಿ ವಾಯುಭಾರ ಕುಸಿತ ಉಂಟಾಗಿದ್ದು, ಕೇರಳ ಮತ್ತು ಕರ್ನಾಟಕದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿಯಲ್ಲಿ 5 ದಿನಗಳ ಕಾಲ ಮತ್ತು ದಕ್ಷಿಣ ಒಳನಾಡಿನಲ್ಲಿ 2 ದಿನಗಳ ಕಾಲ ಭಾರಿ ಮಳೆ ಬೀಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದ್ದರಿಂದಾಗಿ ಗುರುವಾರದವರೆಗೂ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.


ಸಂಬಂಧಿತ ಟ್ಯಾಗ್ಗಳು

Rain Weather Kerala Ocean


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ