ಕಾರ್ನಾಡ್ ನಿಧನ ಹಿನ್ನೆಲೆ : ಇಂದು ಸರ್ಕಾರಿ ರಜೆ

Today is Government holiday

10-06-2019

ಬೆಂಗಳೂರು : ಇಂದು ನಿಧನರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಶ್ರೀ ಗಿರೀಶ್ ಕಾರ್ನಾಡ್ ಅವರ ಗೌರವಾರ್ಥ ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜುಗಳಿಗೆ ಇಂದು ಒಂದು ದಿನ ರಜೆ ಘೋಷಿಸಲಾಗುವುದು ಹಾಗೂ ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಲಾಗುವುದು. ಸಕಲ ಸರ್ಕಾರಿ ಗೌರವಗಳೊಂದಿಗೆ ಮೃತರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಈ ಹಿಂದೆ ನಿಧನರಾದ ಇತರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಗೌರವಾರ್ಥ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಕಾರ್ನಾಡ್ ಅವರ ಗೌರವಾರ್ಥವಾಗಿ ಕೈಗೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

H D Kumaraswamy Director Girish Karnad Author


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ