ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸಿಎಂ ಸೂಚನೆ

H D Kumaraswamy Statement

11-06-2019

ರಾಜ್ಯದ ರಸ್ತೆ ಅಭಿವೃದ್ಧಿಗೆಂದು ಲೋಕೋಪಯೋಗಿ ಇಲಾಖೆಗೆ ಕಳೆದ ಎರಡು ಆಯವ್ಯಯದಲ್ಲಿ 21 ಸಾವಿರ ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಈ ಕಾಮಗಾರಿಗಳನ್ನು ಮುಂದಿನ 6-7 ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸೂಚನೆ ನೀಡಿದರು.

ಲೋಕೋಪಯೋಗಿ ಇಲಾಖೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಂದು ನಡೆದ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಶಾಲಾಸಂಪರ್ಕ ಸೇತು ಯೋಜನೆಯಡಿ ರಾಜ್ಯದಲ್ಲಿ ಒಟ್ಟು 1508 ಸೇತುವೆಗಳನ್ನು 187 .04 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ 963 ಕಾಮಗಾರಿಗಳು ಪೂರ್ಣಗೊಂಡಿವೆ, ಇನ್ನುಳಿದ ಕಾಮಗಾರಿಗಳನ್ನು 2-3 ತಿಂಗಳಿನಲ್ಲಿ ಪೂರ್ಣಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು- ಮೈಸೂರು ಕಾರಿಡಾರ್ ನ ಶೇ.90 ರಷ್ಟು ಭೂಸ್ವಾಧೀನ ಹಾಗೂ ಅರಣ್ಯ ಇಲಾಖೆಗೆ ಸಂಬಂಧಿಸಿದ ಕೆಲಸಗಳು ಪೂರ್ಣಗೊಂಡಿವೆ ಎಂದರು. ಈ ಕಾರ್ಯಕ್ಕೆ ಇರುವ ಅಡೆತಡೆಗಳನ್ನು ಶೀಘ್ರವಾಗಿ ನಿವಾರಿಸಿ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.


ಸಂಬಂಧಿತ ಟ್ಯಾಗ್ಗಳು

H D Kumaraswamy Karnataka Development Bengaluru


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ