ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ

ACB Raid

12-06-2019

ಬೆಂಗಳೂರು: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಪ್ರೊಫೆಸರ್, ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಅಧಿಕಾರಿ, ಜೋಯ್ಡಾದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್‍ ಮನೆಗಳ ಮೇಲೆ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳ ದಾಳಿ ನಡೆಸಿದೆ. ಉತ್ತರ ಕನ್ನಡ, ಧಾರವಾಡ, ಬೆಳಗಾವಿ, ದಾಂಡೇಲಿ ಮತ್ತು ಇತರ ಎರಡು ಕಡೆಗಳಲ್ಲಿ ಏಕಕಾಲಕ್ಕೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಭ್ರಷ್ಟಾಚಾರ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸರ್ಕಾರಿ ಅಧಿಕಾರಿಗಳ ವಿರುದ್ಧ ದಾಳಿ ನಡೆಸಲಾಗಿದ್ದು, ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

ACB Corruption Police Raid


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ