ಜೂ.21 ರಿಂದ ಮುಖ್ಯಮಂತ್ರಿಗಳ ಗ್ರಾಮವಾಸ್ತವ್ಯ ಶುರು

H D Kumarswamy

12-06-2019

ಕಲಬುರಗಿಯ ಕುಗ್ರಾಮದಲ್ಲಿ ಮುಖ್ಯಮಂತ್ರಿ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದೆ. ಇದರ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿದ್ದತೆ ಮಾಡಿದ್ದಾರೆ.

ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್‍ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ.

ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ ಬೆಳೆಸಲಿದ್ದಾರೆ. ಜೂನ್ 21 ರಿಂದ ಹಳ್ಳಿ ಜನರ ಕಷ್ಟ ಕೇಳುವ ಗ್ರಾಮ ವಾಸ್ತವ್ಯಕ್ಕೆ ಚಾಲನೆ ನೀಡಲಿದ್ದಾರೆ. ಇಷ್ಟು ದಿನ ಬೇರೆ ಬೇರೆ ಗೊಂದಲಗಳಲ್ಲಿ ಸಿಲುಕಿದ್ದ ಸಿಎಂ, ಈಗ ಜನರ ಬಳಿಗೆ ಹೋಗಲು ಮುಂದಾಗಿದ್ದಾರೆ.


ಸಂಬಂಧಿತ ಟ್ಯಾಗ್ಗಳು

H D Kumarswamy Development Kalburgi Karnataka


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ